Ticker

6/recent/ticker-posts

Ad Code

Responsive Advertisement

ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳಿಂದ ಗೌರವಪೂರ್ವಕ ಸ್ವಾಗತ*

ಶಿವಮೊಗ್ಗ ಜೂನ್ 15,2022 (ಕ.ವಾ):  ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಜೂನ್ 16ರಂದು  ನಡೆಯಲಿರುವ ಕುವೆಂಪು ವಿಶ್ವವಿದ್ಯಾಲಯದ 31 ಮತ್ತು 32ನೇ ಘಟಿಕೋತ್ಸವಕ್ಕೆ ಭಾಗಾವಹಿಸಲು ಆಗಮಿಸುವ ಸಂದರ್ಭದಲ್ಲಿ  ಮಾರ್ಗಮಧ್ಯದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅವರಿಗೆ ಭವ್ಯ ಸ್ವಾಗತ ಕೋರಿದರು.







ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿದ ರಾಜ್ಯಪಾಲರು ಮೊದಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಮಿಸಿದಾಗ ಅಲ್ಲಿನ ಜಿಲ್ಲಾಧಿಕಾರಿ ಶ್ರೀನಿವಾಸ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಿ ಗಣೇಶ್  ಅವರು  ಸ್ವಾಗತ ಕೋರಿ, ಬೀಳ್ಕೊಟ್ಟರು.

ಬಳಿಕ ತುಮಕೂರು ಜಿಲ್ಲೆಗೆ ಆಗಮಿಸಿದ ರಾಜ್ಯಪಾಲರಿಗೆ ಅಲ್ಲಿನ ಜಿಲ್ಲಾಧಿಕಾರಿಗಳಾದ ಪಾಟೀಲ್ ಯಲಗೌಡ ಅವರು ಸ್ವಾಗತ ಕೋರಿ, ಬೀಳ್ಕೊಟ್ಟರು.

ಬಳಿಕ ಚಿತ್ರದುರ್ಗಕ್ಕೆ ಬಂದಾಗ ರಾಜ್ಯಪಾಲರಿಗೆ ಡಿಸಿ ಕವಿತಾ ಎಸ್ ಮನ್ನಿಕೇರಿ  ಎಸ್ಪಿ ಕೆ.ಪರಶುರಾಮ್, ಅವರು ಸ್ವಾಗತ ಕೋರಿ, ಬೀಳ್ಕೊಟ್ಟರು.

ದಾವಣಗೆರೆಯಲ್ಲಿ  ಜಿಲ್ಲಾಧಿಕಾರಿ ಮಹಂತೇಶ್ ಬೀಳಗಿ, ಎಸ್ಪಿ ಸಿ.ಬಿ.ರಿಶ್ಯಾಂತ್ ಅವರು ಸ್ವಾಗತ ಕೋರಿ ಬೀಳ್ಕೊಟ್ಟರು.

ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಡಾ. ಆರ್ ಸೇಲ್ವಮಣಿ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಲಕ್ಷ್ಮೀಪ್ರಸಾದ್, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ವೀರಭದ್ರಪ್ಪ, ಕುಲ ಸಚಿವರುಗಳಾದ ಅನುರಾಧ, ನವೀನ್ ಕುಮಾರ್, ಕೃಷಿ ವಿಶ್ವವಿದ್ಯಾಲಯದ ಡಾ. ಎಂ. ಹನುಮಂತಪ್ಪ ಸ್ವಾಗತ ಕೋರಿದರು. 

ಚಿತ್ರದುರ್ಗ ಜಿಲ್ಲಾಡಳಿತದಿಂದ  ಗೌರವ ರಕ್ಷೆ ನೀಡಲಾಯಿತು.


Post a Comment

0 Comments

Ad Code

Responsive Advertisement