Ticker

6/recent/ticker-posts

Ad Code

Responsive Advertisement

ಜುಲೈ 18 ರಿಂದ ಸ್ತ್ರೀ ಶಕ್ತಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ಬೆಂಗಳೂರು ನಗರ ಜಿಲ್ಲೆಜುಲೈ 16 (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆವತಿಯಿಂದ ಜುಲೈ 18 ರಿಂದ ಜುಲೈ 24 ರವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ  “ವಿಭಾಗೀಯ ಮಟ್ಟದ ಸ್ತ್ರೀ ಶಕ್ತಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಹಮ್ಮಿಕೊಳ್ಳಲಾಗಿದೆ.

             ಜುಲೈ 18 ರಂದು ಬೆಳಗ್ಗೆ 11:00 ಗಂಟೆಗೆ ಸ್ತ್ರೀ ಶಕ್ತಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು  ಮುಖ್ಯಮಂತ್ರಿಗಳಾದ ಬಸವರಾಜ. ಎಸ್. ಬೊಮ್ಮಾಯಿ ರವರು ಉದ್ಘಾಟಿಸಲಿದ್ದಾರೆ.

ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ಕೇಂದ್ರ  ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜ್ಯ ಸಚಿವ ಎಂ .ರಾಜೀವ್ ಚಂದ್ರಶೇಖರ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

ಗಣಿ ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಆಚಾರ್ ಹಾಲಪ್ಪ ಬಸಪ್ಪ ರವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಹಿಸುವರು.

ಮುಖ್ಯ ಅತಿಥಿಗಳಾಗಿ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಕಂದಾಯ ಸಚಿವ ಆರ್.ಅಶೋಕ,  ವಸತಿ ಸಚಿವ ವಿ.ಸೋಮಣ್ಣ,  ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಸಿ.ಎನ್,  ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ನಗರಾಭಿವೃದ್ಧಿ ಸಚಿವ  ಬಿ.ವಿ. ಬಸವರಾಜ ಮತ್ತು ಇತರೆ ಗಣ್ಯರು ಭಾಗವಹಿಸುವರು.


Post a Comment

0 Comments

Ad Code

Responsive Advertisement