ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜಗದ್ಗುರು ಶ್ರೀಮನ್ ಮಧ್ವಾಚಾರ್ಯರ ಮೂಲ ಮಹಾ ಸಂಸ್ಥಾನಾಧೀಶ್ವರರಾದ ಶ್ರೀ ರಾಘವೇಂದ್ರ ಮಠದ ಪ್ರಸ್ತುತ ಪೀಠಾಧಿಪತಿಗಳಾದ ಪರಮ ಪೂಜ್ಯ 108 ಶ್ರೀ ಸುಬುಧೇಂದ್ರ ತೀರ್ಥ ಶ್ರೀ ಪಾದಂಗಳವರು "ಲೋಕಕಲ್ಯಾಣ" ಕ್ಕಾಗಿ ಶ್ರೀಮನ್ ಮೂಲ ರಾಮಚಂದ್ರ ದೇವರ ಸಂಸ್ಥಾನ ಪೂಜೆಯೊಂದಿಗೆ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಮಹಾ ಮಂಗಳಾರತಿಯನ್ನು ನೆರೆವೇರಿಸಿ ದರು, ಈ ಸಂದರ್ಭದಲ್ಲಿ ಶಿಷ್ಯರು ಭಕ್ತರು ಶ್ರೀಮನ್ಮೂಲ ರಾಮಚಂದ್ರ ದೇವರ ದರ್ಶನ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ತೀರ್ಥ ಪ್ರಸಾದವನ್ನು ಸ್ವೀಕರಿಸಿ ನಂತರ ಶ್ರೀ ಪರಮಪೂಜ್ಯ ಶ್ರೀಗಳಿಂದ ಫಲಮಂತ್ರಾಕ್ಷತೆ ಯನ್ನು ಸ್ವೀಕರಿಸಿ ಶ್ರೀ ಹರಿವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು ಅಂದಾಜು 5,500 ಕ್ಕೂ ಮಿಗಿಲಾಗಿ ಭಕ್ತ ಜನರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು ಎಂದು ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದಿಂದ್ರ ಆಚಾರ್ಯರು ತಿಳಿಸಿದರು.


0 Comments