ಬೆಂಗಳೂರು 08.07.2022: ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಎರಡು ದಿನಗಳ ಭೇಟಿಗಾಗಿ ಶುಕ್ರವಾರ ಬೆಂಗಳೂರಿಗೆ ಆಗಮಿಸಿದರು.
ಸಂಜೆ ವಿಶೇಷ ವಿಮಾನದಲ್ಲಿ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಶ್ರೀ ವೆಂಕಯ್ಯ ನಾಯ್ಡು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಸಂಸದರಾದ ಪಿ ಸಿ ಮೋಹನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಸದರಾದ ಪಿ ಸಿ ಮೋಹನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
----
ರಾಜಭವನದಲ್ಲಿ ಮೈಸೂರು ಪೇಟ ತೊಡಿಸಿ ಉಪರಾಷ್ಟ್ರಪತಿಯನ್ನು ಸ್ವಾಗತಿಸಿದ ರಾಜ್ಯಪಾಲರು
ಬೆಂಗಳೂರು 08.07.2022: ಬೆಂಗಳೂರಿಗೆ ಆಗಮಿಸಿರುವ ಗೌರಾವನ್ವಿತ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ರಾಜಭವನದಲ್ಲಿ ಮೈಸೂರು ಪೇಟ ತೊಡಿಸಿ, ಹೂಗುಚ್ಚ ನೀಡುವ ಮೂಲಕ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ರಾಜಭವನದ ಅಧಿಕಾರಿಗಳು ಉಪಸ್ಥಿತರಿದ್ದರು.

0 Comments