ಬೆಂಗಳೂರು : ರಾಜರಾಜೇಶ್ವರಿ ವಿಧಾನ ಸಭಾ ಕ್ಷೇತ್ರದ ಯಶವಂತಪುರ ಗೋಕುಲ ಒಂದನೇ ಹಂತದ 11 ನೇ ಕ್ರಾಸ್ ನಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಿ ದೇವಾಲಯದಲ್ಲಿ ಬುಧವಾರದಂದು ಆಷಾಢ ಮಾಸ ಕೃಷ್ಣ ಪಕ್ಷ ಸಪ್ತಮಿ ರೇವತಿ ನಕ್ಷತ್ರದ ದಿನ ಜಗನ್ಮಾತೆ, ನಾಡ ದೇವತೆ, ಬೆಟ್ಟದ ತಾಯಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ಜಯಂತ್ಯೋತ್ಸವದ ಪ್ರಯುಕ್ತ ಅಮ್ಮನವರಿಗೆ ವಿಶೇಷ ಅಲಂಕಾರ ಸೇವೆಯೊಂದಿಗೆ, ವಿಶೇಷ ಪೂಜಾ ಕೈಂಕರ್ಯಗಳ ಜೊತೆಗೆ, ಬೆಳಿಗ್ಗೆ ದೇವಸ್ಥಾನದಲ್ಲಿ ಚಂಡಿಕಾ ಹೋಮವನ್ನು ಸಹ ದೇವಸ್ಥಾನದ ಧರ್ಮಾಧಿಕಾರಿ ನಂಜಪ್ಪನವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಉಮೇಶ್, ಶ್ರೀಮತಿ ರಮಾದೇವಿರವರ ಪ್ರಾಯೋಜಕತ್ವದಲ್ಲಿ ಶ್ರೀಮತಿ ಜಯಮ್ಮ ನಂಜಪ್ಪನವರ ಸಹಕಾರದೊಂದಿಗೆ ಜರುಗಿದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನಗರದ ನಾನಾ ಭಾಗಗಳಿಂದ ಭಕ್ತಾದಿಗಳು ಬಂದಿದ್ದು, ಸಂಜೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಉತ್ಸವ ಮೂರ್ತಿಯ ಪಲ್ಲಕ್ಕಿ ಮೆರವಣಿಗೆ ಸುತ್ತಮುತ್ತಲಿನ ಮುಖ್ಯ ರಸ್ತೆಯಲ್ಲಿ ನೆರವೇರಿಸಲಾಯಿತು.

0 Comments