Ticker

6/recent/ticker-posts

Ad Code

Responsive Advertisement

ಡಾ. ರಾಜಕುಮಾರ್ ಹಾಗೂ ಡಾ. ಪುನೀತ್ ರಾಜಕುಮಾರ್ ವಿಷಯ ಆಧಾರಿತ ವಿಶೇಷ ಫಲಪುಷ್ಪ ಪ್ರದರ್ಶನ

 ಈ ಬಾರಿಯ 212 ನೇ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ  ಕರ್ನಾಟಕ ರತ್ನ ಡಾ. ರಾಜಕುಮಾರ್  ಹಾಗೂ ಡಾ. ಪುನೀತ್ ರಾಜಕುಮಾರ್ ರವರ ವಿಷಯ ಆಧಾರಿತ  ವಿಶೇಷ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.


ಆಗಸ್ಟ್ 5ರಂದು ಫಲಪುಷ್ಪ  ಪ್ರದರ್ಶನವು  ಉದ್ಘಾಟನೆಗೊಳ್ಳಲಿದ್ದು ಖ್ಯಾತ ಚಿತ್ರನಟ   ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ಧರ್ಮಪತ್ನಿ ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ರವರನ್ನು  ಫಲಪುಷ್ಪ ಪ್ರದರ್ಶನಕ್ಕೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಆತ್ಮೀಯವಾಗಿ  ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಉದ್ಯಾನ  ಕಲಾಸಂಘದ  ಉಪಾಧ್ಯಕ್ಷ  ವಾಸುದೇವ್. ತೋಟಗಾರಿಕೆ  ಜಂಟಿ ನಿರ್ದೇಶಕ  ಡಾ. ಎಂ ಜಗದೀಶ್ ಹಾಗೂ  ಲಾಲ್ ಬಾಗ್  ತೋಟಗಾರಿಕೆ ಉಪನಿರ್ದೇಶಕರಾದ  ಶ್ರೀಮತಿ ಜಿ ಕುಸುಮ  ಹಾಜರಿದ್ದರು.

Post a Comment

0 Comments

Ad Code

Responsive Advertisement