ಬೆಂಗಳೂರು, ಜುಲೈ 27 (ಕರ್ನಾಟಕ ವಾರ್ತೆ) : ಬೆಂಗಳೂರು ಜಲಮಂಡಳಿಯು (ದಕ್ಷಿಣ -2)-2, (ದಕ್ಷಿಣ -2)-1, (ನೈರುತ್ಯ-2)-3, (ನೈರುತ್ಯ-2)-2, (ಆಗ್ನೇಯ-1)-3, (ಪೂರ್ವ-2)-3, (ವಾಯುವ್ಯ-1)-2, (ಉತ್ತರ -1)-2 ಮತ್ತು (ಉತ್ತರ-1)-1) ಉಪವಿಭಾಗಗಳಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದು ಕೊರತೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ನೀರಿನ ಅದಾಲತ್ ಅನ್ನು ಆಗಸ್ಟ್ 28, 2022 ಗುರುವಾರದಂದು ಬೆಳಿಗ್ಗೆ 9.30 ರಿಂದ 11 ಗಂಟೆಯವರೆಗೆ ನಡೆಸಲಾಗುವುದು.
ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಲಿಯ 24/7 ದೂರು ನಿರ್ವಹಣಾ ಕೇಂದ್ರದ ಸಹಾಯವಾಣಿ 1916ಗೆ ಕರೆಮಾಡಿ ದೂರು ದಾಖಲಿಸಬಹುದು ಹಾಗೂ ವಾಟ್ಸ್‍ಆಪ್ ಸಂಖ್ಯೆ: 8762228888 ಸಂದೇಶದ ಮೂಲಕ ದೂರನ್ನು ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಮೇಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಈ ಅದಾಲತ್ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
0 Comments