ಬೆಂಗಳೂರು, ಜುಲೈ 06 (ಕರ್ನಾಟಕ ವಾರ್ತೆ) : ಬೆಂಗಳೂರು ಜಲಮಂಡಳಿಯು (ಪಶ್ಚಿಮ) -1, (ಆಗ್ನೇಯ-1), (ದಕ್ಷಿಣ -1), (ಪೂರ್ವ-1) -1, (ಉತ್ತರ ವಿಲೇಜ್)-2 (ಕೇಂದ್ರ-1) (ವಾಯುವ್ಯ -1) ಮತ್ತು (ವಾಯುವ್ಯ -4), ಉಪವಿಭಾಗಗಳಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ನೀರಿನ ಅದಾಲತ್‍ನ್ನು ಜುಲೈ 07 ರಂದು ಬೆಳಿಗ್ಗೆ 9.30 ರಿಂದ 11 ಗಂಟೆಯವರೆಗೆ ನಡೆಸಲಾಗುವುದು.
ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಳಿಯ 24/7 ದೂರು ನಿರ್ವಹಣಾ ಕೇಂದ್ರದ ಸಹಾಯವಾಣಿ 1916 ಗೆ ಕರೆಮಾಡಿ ದೂರು ದಾಖಲಿಸಬಹುದು. ಹಾಗೂ ವಾಟ್ಸ್ ಆಪ್ ಸಂಖ್ಯೆ: 8762228888 ಗೆ ಸಂದೇಶದ ಮೂಲಕ ದೂರನ್ನು ಸಲ್ಲಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
0 Comments