Ticker

6/recent/ticker-posts

Ad Code

Responsive Advertisement

ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ರಾಜೇಶ್ವರಿ ಸುಬ್ಬರಾಯ್ಡು ಅವರ ಅಧ್ಯಕ್ಷತೆಯಲ್ಲಿ ಪಾಲಿಕೆ ಸಾಮಾನ್ಯ ಸಭೆ

ಬಳ್ಳಾರಿ,ಜು.06: ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ರಾಜೇಶ್ವರಿ ಸುಬ್ಬರಾಯ್ಡು ಅವರ ಅಧ್ಯಕ್ಷತೆಯಲ್ಲಿ ನಗರದ ಜಿಪಂನ ನಜೀರ್‍ಸಾಬ್ ಸಭಾಂಗಣದಲ್ಲಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯು ಬುಧವಾರದಂದು ನಡೆಯಿತು.


ಬಳ್ಳಾರಿ ನಗರದಲ್ಲಿ ತೆರಿಗೆ ಆಸ್ತಿ ಹೆಚ್ಚಳ ಮಾಡುವುದಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಪಾಲಿಕೆ ಸದಸ್ಯರು ಜನತೆಗೆ ಹೊರೆಯಾಗದ ರೀತಿಯಲ್ಲಿ ತೆರಿಗೆ ಹೆಚ್ಚಿಸಲು ಸಲಹೆ ನೀಡಿದರು.

ನಗರದ ಕೋಟೆ ಪ್ರದೇಶದ ಮುಂಭಾಗದ ರಿಪಬ್ಲಿಕ್ ಸರ್ಕಲ್‍ಗೆ  ಭಗವಾನ್ ಮಹಾವೀರ ಹೆಸರು ನಾಮಕರಣ ಮಾಡುವುದಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಯಿತು ಮತ್ತು ಸಮುದಾಯದವರು ತಮ್ಮ ಸ್ವಂತ ಖರ್ಚಿನಲ್ಲಿ ಸದರಿ ವೃತ್ತವನ್ನು ಅಭಿವೃದ್ಧಿಪಡಿಸುವುದಕ್ಕೆ ಸಂಬಂಧಿಸಿದಂತೆ ನೀಲನಕ್ಷೆ ಸಲ್ಲಿಸಿದ್ದಲ್ಲಿ ಮುಂದಿನ ಸಭೆಯಲ್ಲಿ ಚರ್ಚಿಸಿ ಅನುಮೋದನೆಗೆ ಮಂಡಿಸಲು ನಿರ್ಧರಿಸಲಾಯಿತು.

ಕಾರ್ಪೋರೇಟರ್‍ಗಳು ತಮ್ಮ ವಾರ್ಡ್‍ಗಳ ವಿವಿಧ ಸಮಸ್ಯೆಗಳನ್ನು ಸಭೆಯಲ್ಲಿ ಮಂಡಿಸಿದರು.

ಪ್ರಮುಖವಾಗಿ ವಾರ್ಡ್‍ಗಳಲ್ಲಿ ಸುಲಭ ಶೌಚಾಲಯಗಳ ನೀರಿನ ವ್ಯವಸ್ಥೆ, ಅವುಗಳ ಕಾರ್ಯನಿರ್ವಹಣೆ ಕುರಿತು ವಾರ್ಡ್ ಸದಸ್ಯರು ಬಿಂಬಿಸಿದಾಗ ಅದಕ್ಕೆ ಪ್ರತಿಕ್ರಿಯಿಸಿದ ಪಾಲಿಕೆ ಆಯುಕ್ತರು ಸಂಬಂಧಿಸಿದ ಎಂಜಿನಿಯರ್‍ಗಳಿಗೆ ತ್ವರಿತಗತಿಯಲ್ಲಿ ಕ್ರಮಕೈಗೊಳ್ಳಲು ಸೂಚನೆ ನೀಡಿದರು.

ಸಭೆಯಲ್ಲಿ ವಾರ್ಡ್‍ಗಳಲ್ಲಿನ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಟ್ರಾನ್ಸ್‍ಫಾರ್ಮ್ ಸ್ಥಳಾಂತರ ಹಾಗೂ ಇತರೆ ವಿವಿಧ ವಿಷಯಗಳ ಕುರಿತು ಸುಧೀರ್ಘ ಚರ್ಚೆ ನಡೆಯಿತು.

ವಿವಿಧ ಖಾಸಗಿ ವಸತಿ ಅನುಮೋದಿತ ವಿನ್ಯಾಸಗಳು, ಬಹುನಿವೇಶನ ಖಾಸಗಿ ವಸತಿ ಅನುಮೋದಿತ ವಿನ್ಯಾಸಗಳಿಗೆ ಸಭೆ ಅನುಮೋದನೆ ನೀಡಿತು.

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಯೋಮೆಡಿಕಲ್ ತ್ಯಾಜ್ಯದ ಸೇವಾ ಶುಲ್ಕ ವಿಧಿಸುವ ಬಗ್ಗೆ,ಮಹಾನಗರ ಪಾಲಿಕೆಯ ಘನತ್ಯಾಜ್ಯ,ದ್ರವ ತ್ಯಾಜ್ಯ ಹಗೂ ಸಿ ಮತ್ತು ಡಿ ತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆ ಹಾಗೂ ಇತರೇ ವಾಹನಗಳಿಗೆ ಅವಶ್ಯವಿರುವ ಮಾನವ ಸಂಪನ್ಮೂಲ ಸೇವೆಯನ್ನು ಹೊರಗುತ್ತಿಗೆ ಅಡಿ ಪಡೆಯುವುದಕ್ಕೆ, 653ಪೌರಕರ್ಮಿಕರಿಗೆ ಬೆಳಗಿನ ಉಪಹಾರ ಒದಗಿಸುವುದಕ್ಕೆ ಭರಿಸಲಾದ 83.42ಲಕ್ಷ ರೂ.ಗಳು ಸೇರಿದಂತೆ ವಿವಿಧ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಿ ಅನುಮೋದನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪಮೇಯರ್ ಮಾಲನ್.ಬಿ, ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್,ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಮಹಾನಗರ ಪಾಲಿಕೆಯ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳು, ಮಹಾನಗರ ಪಾಲಿಕೆ ಆಯುಕ್ತರಾದ ಪ್ರೀತಿ ಗೆಹ್ಲೋಟ್, ಮಹಾನಗರ ಪಾಲಿಕೆಯ ಸದಸ್ಯರು ಮತ್ತು ಅಧಿಕಾರಿಗಳು ಇದ್ದರು.




 


Post a Comment

0 Comments

Ad Code

Responsive Advertisement