Ticker

6/recent/ticker-posts

Ad Code

Responsive Advertisement

ಮೃತಪಟ್ಟ ಸಾಗರದ ಪತ್ರಿಕಾ ವಿತರಕನ ಕುಟುಂಬಕ್ಕೆ ಪರಿಹಾರ: ಕಾರ್ಮಿಕ ಸಚಿವ ಹೆಬ್ಬಾರ್

ಬೆಂಗಳೂರು:ಪ ತ್ರಿಕೆ ಹಂಚುವ ಸಂದರ್ಭದಲ್ಲಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕ ಗಣೇಶ್ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದಾಗಿ ಕಾರ್ಮಿಕ ಸಚಿವರಾದ ಶಿವರಾಂ ಹೆಬ್ಬಾರ್ ಭರವಸೆ ನೀಡಿದ್ದಾರೆ.

ಗಣೇಶ್ ಅವರ ಕುಟುಂಬ ತೀವ್ರ ಸಂಕಷ್ಟದಲ್ಲಿರುವ ಬಗ್ಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ವಿಕಾಸಸೌಧದಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆ.

ಅಸಂಘಟಿತ ವಲಯದಲ್ಲಿ ಪತ್ರಿಕಾ ವಿತರಕರನ್ನು ಸೇರ್ಪಡೆ ಮಾಡಿದ್ದು, ಇ ಶ್ರಮ ಪೋರ್ಟ್ ನಲ್ಲಿ ನೋದಾಯಿಸಿಕೊಳ್ಳಲು ತಿಳಿಸಿದರು. ವಿತರಕರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕೆಯುಡಬ್ಲ್ಯೂಜೆ ಪದಾಧಿಕಾರಿಗಳಾದ ಅಶೋಕ ಕಾರಂಜಿ, ಶಿವಕುಮಾರ ಸ್ವಾಮಿ, ರವಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Post a Comment

0 Comments

Ad Code

Responsive Advertisement