Ticker

6/recent/ticker-posts

Ad Code

Responsive Advertisement

ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗಡೆ ರಾಜ್ಯಸಭೆಗೆ ನೇಮಕ-ಶಾಸಕ ಸೋಮಶೇಖರ ರೆಡ್ಡಿ ಹರ್ಷ

ಬಳ್ಳಾರಿ ಜುಲೈ 07. ಪ್ರಧಾನಿ ಮೋದಿ ಸರ್ಕಾರದಿಂದ ಮತ್ತೊಂದು ಅಚ್ಚರಿ ಹಾಗೂ ಸಂತೋಷದ ನೇಮಕಾತಿ! ಆಗಿದೆ ಎಂದು ಬಳ್ಳಾರಿ ಶಾಸಕ ಗಾಲಿ ಸೋಮಶೇಖರ ರೆಡ್ಡಿಯವರು ತಿಳಿಸಿದ್ದಾರೆ. ಆರೋಗ್ಯ, ಶಿಕ್ಷಣ, ಸ್ತ್ರೀಶಕ್ತಿ, ಗ್ರಾಮೀಣಾಭಿವೃದ್ಧಿ ಹೀಗೆ ವಿವಿಧ ಕ್ಷೇತ್ರಗಳಲ್ಲಿ ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುತ್ತಿರುವ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗಡೆಯವರಂತ ಅರ್ಹರನ್ನು ರಾಜ್ಯಸಭೆಗೆ ನೇಮಕ ಮಾಡಿದ ಸನ್ಮಾನ್ಯ ನರೇಂದ್ರ ಮೋದಿಯವರಿಗೆ ಧನ್ಯವಾದಗಳು ಹಾಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


ಶಾಸಕ ಗಾಲಿ ಸೋಮಶೇಖರ ರೆಡ್ಡಿಯವರು  ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗಡೆಯವರನ್ನು ಗೌರವ ಪೂರ್ವಕವಾಗಿ ಭೇಟಿಯಾಗಿ ಸನ್ಮಾನಿಸಿ ಅಭಿನಂದನೆಗಳನ್ನು ತಿಳಿಸಿದ್ದಾರೆ.



 

Post a Comment

0 Comments

Ad Code

Responsive Advertisement