Ticker

6/recent/ticker-posts

Ad Code

Responsive Advertisement

ಗಡಿ ಸಮಸ್ಯೆಗಳ ಕುರಿತು ಸಭೆ

ಬೆಂಗಳೂರು, ಜುಲೈ 04 (ಕರ್ನಾಟಕ ವಾರ್ತೆ) : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಡಾ.ಸಿ ಸೋಮಶೇಖರ, ಭಾ.ಆ.ಸೇ(ನಿ), ಅಧ್ಯಕ್ಷರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಇವರ ಅಧ್ಯಕ್ಷತೆಯಲ್ಲಿ   ಗಡಿ ಸಮಸ್ಯೆಗಳ  ಬಗ್ಗೆ  ಸಭೆ ನಡೆಯಿತು.

ಕೆ. ಶ್ರೀನಿವಾಸ್ ಭಾ.ಆ.ಸೇ ಜಿಲ್ಲಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಪ್ರಾಧಿಕಾರದ ಕಾರ್ಯದರ್ಶಿಗಳಾದ ಪ್ರಕಾಶ್ ಮತ್ತೀಹಳ್ಳಿ, ಕೆ. ರೇವಣಪ್ಪ ಕ.ಸಾ.ಸೇ,   ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಶ್ರೀಮತಿ ವಿಜಯಾ  ಇ ರವಿಕುಮಾರ್,  ಅಪರ ಜಿಲ್ಲಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಶ್ರೀಮತಿ ನಮ್ರತ, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೋಹನ್ ಕುಮಾರ್ ತಹಸೀಲ್ದಾರ್, ಹೊಸಕೋಟೆ, ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಕಛೇರಿಗಳ ಮುಖ್ಸಸ್ಥರು ಉಪಸ್ಥಿತರಿದ್ದು, ಗಡಿ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಾಯಿತು.  

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪರಾಮರ್ಶೆ ಮಾಡಲಾಯಿತು  ಹಾಗೂ ಗಡಿ ಭಾಗದಲ್ಲಿ ಉದ್ಯೋಗ ಮೇಳವನ್ನು ಮಾಡಲು,  ಶೈಕ್ಷಣಿಕ ಸಮಸ್ಯೆಗಳ ಪಟ್ಟಿ ಮಾಡಲು  ಜಿಲ್ಲಾಧಿಕಾರಿಗಳು ಸೂಚಿಸಿದರು.


Post a Comment

0 Comments

Ad Code

Responsive Advertisement