ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬೆಂಗಳೂರು ನಗರ ಪೊಲೀಸ್ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜಂಟಿ ಸಹಯೋಗದಲ್ಲಿ ಇಂದು ಪುಟ್ಟಣ್ಣ ಚೆಟ್ಟಿ ಪುರಭವನ(ಟೌನ್ ಹಾಲ್)ದಲ್ಲಿ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಪ್ರತಾಪ್ ರೆಡ್ಡಿ ರವರ ಅಧ್ಯಕ್ಷತೆಯಲ್ಲಿ "ಸಾರ್ವಜನಿಕ ಶಾಂತಿ ಸೌಹಾರ್ದ ಸಭೆ ನಡೆಯಿತು.


ಸಭೆಯಲ್ಲಿ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ರವಿಕಾಂತೆಗೌಡ, ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸುಬ್ರಮಣ್ಯ(ಪೂರ್ವ), ಸಂದೀಪ್ ಪಾಟೀಲ್(ಪಶ್ವಿಮ), ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಮಹಂತೇಶ್ ಬಿಳಗಿ,  ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿಯಾದ ಶ್ರೀನಿವಾಸುಲು, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹೇಮಂತ್, ಉಪ ಪೊಲೀಸ್ ಆಯುಕ್ತರು, ವಿಭಾಗೀಯ ಉಪ ಪೊಲೀಸ್ ಆಯುಕ್ತರು, ಅಗ್ನಿಶಾಮಕ ಅಧಿಕಾರಿಗಳು, ಪಾಲಿಕೆ ಹಾಗೂ ಬೆಸ್ಕಾಂ ಇಲಾಖೆಯ ಮುಖ್ಯ ಅಭಿಯಂತರರು, ಗಣೇಶ ಪ್ರತಿಷ್ಠಾನದ ಆಯೋಜನಕರು, ವಿವಿಧ ಸಮುದಾಯದ ಮುಖಂಡರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.