ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ, ಆಗಸ್ಟ್ 4, ಗುರುವಾರ ಬೆಳಗ್ಗೆ ಧಾರ್ಮಿಕ ಕಾರ್ಯಕ್ರಮಗಳು ಜರುಗಿ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ಏರ್ಪಡಿಸಲಾಗಿದ್ದ "ಹರಿದಾಸವಾಣಿ" ಗಾಯನ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ರಜನಿ ಗುರುರಾಜ್ ಅವರು ಹರಿದಾಸರ ಪದಗಳನ್ನು ಪ್ರಸ್ತುತ ಪಡಿಸಿದರು.
ಶ್ರೀ ಟಿ ಎಸ್ ಮಧುರನಾಥ್ ಪಿಟೀಲು ವಾದನದಲ್ಲಿ, ಶ್ರೀ ಶ್ರೀನಿವಾಸ್ ಅನಂತರಾಮಯ್ಯ ಮೃದಂಗ ವಾದನದಲ್ಲಿ ಸಾಥ್ ನೀಡಿದರು.

0 Comments