ಬೆಂಗಳೂರು : ಮಲ್ಲೇಶ್ವರಂ ವಿಧಾನ ಸಭಾ ಕ್ಷೇತ್ರದ ಕೋದಂಡ ರಾಮಪುರದಲ್ಲಿರುವ ಹರಿಹರ ರಾಜು ಕ್ಷತ್ರಿಯ ಸಂಘದ ಕಲ್ಯಾಣಮಂಟಪದ ಮುಂಭಾಗದಲ್ಲಿ ಸೋಮವಾರದಂದು ನಮ್ಮ ಭಾರತ ದೇಶದ 75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಶುಭ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾಗಿರುವ ಪ್ರಕಾಶ್ ರಾಜುರವರು ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿದರು.
ಈ ವೇಳೆ ಮಾತನಾಡಿದ ಅಧ್ಯಕ್ಷರು, ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ವೀರರನ್ನು ಸ್ಮರಿಸಿ, ಅವರೆಲ್ಲರ ತ್ಯಾಗ ಬಲಿದಾನಗಳ ಫಲವಾಗಿ ನಮಗೆ ಸಿಕ್ಕ ಈ ಸ್ವಾತಂತ್ರ್ಯವನ್ನು, ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಸಮಾಜವನ್ನು ರೂಪಿಸಿ ಅವರಿಗೆ ಬಳುವಳಿಯಾಗಿ ಕೊಡಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸದಸ್ಯರುಗಳಾದ ಸಾಗರ್ ರಾಜು, ರಾಜೀವ ನಾಣಿ, ಪ್ರಸನ್ನ ರಾಜು ಇನ್ನೂ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಲ್ಲರಿಗೂ ಸಿಹಿ ಹಂಚಿ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.

0 Comments