ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ತ್ಯಾಗರಾಜನಗರದಲ್ಲಿರುವ ಶ್ರೀ ಅಭಯಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಆಗಸ್ಟ್ 19, ಶುಕ್ರವಾರ ಸಂಜೆ ಏರ್ಪಡಿಸಿದ್ದ ಹರಿನಾಮ ಸಂಕೀರ್ತನೆ ಕಾರ್ಯಕ್ರಮದಲ್ಲಿ ಶ್ರೀಮತಿ ರಮ್ಯಾ ಸುಧೀರ್ ಅವರು ಪ್ರಸಿದ್ಧ ಹರಿದಾಸರ ಪದಗಳನ್ನು ಪ್ರಸ್ತುತ ಪಡಿಸಿದರು.
ಶ್ರೀ ಶ್ರೀನಿವಾಸ ಕಾಖಂಡಕಿ ತಬಲಾ ವಾದನದಲ್ಲಿ, ಶ್ರೀ ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ ಸಾಥ್ ನೀಡಿದರು. ದೇವಸ್ಥಾನದ ಮುಖ್ಯಸ್ಥರಾದ ಶ್ರೀ ವಾದಿರಾಜಾಚಾರ್ಯರು ಕಲಾವಿದರಿಗೆ ಪ್ರಶಸ್ತಿ ಪತ್ರ ಹಾಗೂ ಪ್ರಸಾದ ವಿತರಣೆ ಮಾಡಿದರು.

0 Comments