Ticker

6/recent/ticker-posts

Ad Code

Responsive Advertisement

Big Breaking News: ರಾಜ್ಯದಲ್ಲಿ ನಡೆಯುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಬಳಕೆ ಕಡ್ಡಾಯ

ಸೆ. 06, ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿ ನಡೆಯುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಕರ್ನಾಟಕದಲ್ಲಿ ಕನ್ನಡವು ಅಡಳಿತ ಭಾಷೆಯ ಜೊತೆಗೆ ಸಾರ್ವಭೌಮ ಭಾಷೆಯಾಗಿದೆ ಕನ್ನಡವನ್ನು ರಾಜ್ಯದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಳಿಸುವ ಸಂಬ0ಧ ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಕಾನೂನಿನನ್ವಯ ಸಂರಕ್ಷಿಸುವ ಸಲುವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ರಚನೆಯಾಗಿದೆ. ಕನ್ನಡವನ್ನು ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರತಕ್ಕದೊಂದು ಕರ್ನಾಟಕ ಭಾಷಾ ಅಧಿನಿಯಮ, 1953ರಲ್ಲಿ, ನಿರ್ದಿಷ್ಟಪಡಿಸಲಾಗಿರುತ್ತದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ದಿನಾಂಕ: 06.09.2022ರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯನ್ನು ಬಳಸದಿರುವ ಬಗ್ಗೆ ಪ್ರಸ್ತಾಪಿಸಿರುತ್ತಾರೆ. ಈ ಬಗ್ಗೆ ವೇದಿಕೆ ಮೇಲೆ ಆಳವಡಿಸಲಾಗುವ ಪರದೆಗಳಲ್ಲಿ, ಫಲಕಗಳಲ್ಲಿ ಹಾಗೂ ಒಟ್ಟಾರೆಯಾಗಿ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಕನ್ನಡ ಬಾಷೆ ನಮಗೆ ಆದ್ಯತೆ ಆಗಬೇಕೇ ಹೊರತು ಆಯ್ಕೆಯಾಗಬಾರದು, ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ, ಪ್ರಾಧಿಕಾರದ ಅಧ್ಯಕ್ಷರ ಪ್ರಸ್ತಾವನೆಯನ್ವಯ, ಇನ್ನು ಮುಂದೆ ರಾಜ್ಯದಲ್ಲಿ ಜರುಗುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬ0ಧಿಸಿದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸತಕ್ಕದೆಂದು ಸುತ್ತೋಲೆ ಹೊರಡಿಸಿದ್ದಾರೆ.

Varthajala bilingual daily, Malleshwaram, Bengaluru

Post a Comment

0 Comments

Ad Code

Responsive Advertisement