Ticker

6/recent/ticker-posts

Ad Code

Responsive Advertisement

*ಶಾಸಕ ಲಿಂಬಾವಳಿಯ ಬಂಧನವಾಗಬೇಕೆಂದು ಅಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ*

ಬೆಂಗಳೂರು : ಬಿಜೆಪಿ ಶಾಸಕ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಮಹಿಳೆಯ ವಿರುದ್ಧ ಬಳಸಿರುವ ಪದ ಹಾಗೂ ಅವರ ದುರ್ನಡತೆಯು ಬಿಜೆಪಿಯ ಹೀನಾಯ  ಸಂಸ್ಕೃತಿಯನ್ನು ಎತ್ತಿ ತೋರುತ್ತದೆ.



 ಮಹಿಳೆಯ ಮೇಲೆ ದೌರ್ಜನ್ಯ ಹಾಗೂ ಅತ್ಯಂತ ಕೆಟ್ಟ ಪದ ಬಳಸಿರುವ ಅರವಿಂದ್ ಲಿಂಬಾವಳಿ ಕೂಡಲೇ ಮಹಿಳೆಯ ಬಳಿ ಕ್ಷಮೆ ಕೇಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಇಂದು  ಪ್ರತಿಭಟನೆ ಮಾಡಿ, ಪ್ರತಿಕೃತಿಯನ್ನು ದಹಿಸಲಾಯಿತು.

ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಗೌರವ ನೀಡಬೇಕೆಂದು ಪ್ರತಿ ಬಾರಿಯೂ ತಮ್ಮ ಸುಳ್ಳು ಭಾಷಣಗಳಲ್ಲಿ ನುಡಿಯುತ್ತಲೇ ಇರುತ್ತಾರೆ. ಆದರೆ, ಬಿಜೆಪಿ ಶಾಸಕರು ನಾಯಕರು ಕರ್ನಾಟಕದಲ್ಲಿ ಮಹಿಳೆಯರಿಗೆ ಯಾವ ರೀತಿಯಲ್ಲಿ  ಗೌರವ ನೀಡುತ್ತಿದ್ದಾರೆ ಎಂಬುದನ್ನು ಮೊದಲು ಮಾಹಿತಿಯನ್ನು ಪಡೆದು ಪ್ರಧಾನ ಮಂತ್ರಿ ಮೋದಿರವರು  ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಿಲಿ ಇಲ್ಲದೆ ಹೋದರೆ ನೀವು ಮಹಿಳೆಯರ ವಿರೋಧಿ ಎಂಬುದು ಸಾಬೀತಾಗುತ್ತದೆ, ಜನಪ್ರತಿನಿಧಿಯಾದ ಅರವಿಂದ್ ಲಿಂಬಾವಳಿ ಬಳಿ ಜನರು ಸಂಕಷ್ಟವನ್ನು ತಿಳಿಸಲು ಬಂದರೆ ಅವರ ವಿರುದ್ಧವೇ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರಿಗೆ ಬೆದರಿಕೆಯನ್ನು ಹಾಕಿರುತ್ತಾರೆ.  ಇವರಂತಹ ಜನಪ್ರತಿನಿಧಿಗಳು ರಾಜ್ಯಕ್ಕೆ ಬೇಕೆ  ? 

 ಇಂತಹ ಅನಾಗರಿಕತೆಯಿಂದ ವರ್ತಿಸಿರುವ ಬಿಜೆಪಿ ಶಾಸಕನನ್ನು ಕೂಡಲೇ ಬಿಜೆಪಿ ತನ್ನ ಪಕ್ಷದಿಂದ ವಜಾಗೊಳಿಸಬೇಕು, ಹಾಗೂ ಸ್ಥಳದಲ್ಲಿದ್ದ ಪೊಲೀಸರು ಮಹಿಳೆಗೆ ರಕ್ಷಣೆ ನೀಡದೆ ಶಾಸಕರ ಸೂಚನೆ  ಪಾಲಿಸಿರುವುದು ರಾಜ್ಯ ಪೋಲಿಸ್ ಇಲಾಖೆಗೆ ಅಗೌರವವಾದಂತಾಗಿಲ್ಲವೇ ? ಹಾಗೂ ಇದು ಅವರು ಕರ್ತವ್ಯಲೋಪ ಮಾಡಿದ್ದಾರೆ ಎಂಬುದು ಬಹಿರಂಗವಾಗಿದೆ,

ಮನವಿ ಸಲ್ಲಿಸಲು ಬಂದ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿ ಹಾಗೂ ಮಾಧ್ಯಮಗಳಿಗೆ ಹೇಳಿಕೆ ನೀಡುವ ಸಂದರ್ಭದಲ್ಲಿ ಬಳಸಿರುವ ಪದ ಅತ್ಯಂತ ಹೀನಾಯ ಪದವಾಗಿದೆ, ಇಂತಹ ಪದ ಬಳಸಿರುವ ಕಿಡಿಗೇಡಿ ಶಾಸಕ ಅರವಿಂದ ಲಿಂಬಾವಳಿಯವರ ವಿರುದ್ಧ ಈ  ಕೂಡಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಾಸಕರನ್ನ ಬಂಧಿಸಬೇಕೆಂದು ಆಗ್ರಹಿಸಲಾಹಿತು. ಈ ಪ್ರತಿಭಟನೆ ಯನ್ನು ಬೆಂಗಳೂರು ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ  ನಡೆಸಲಾಯಿತು, ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಎಸ್. ಮನೋಹರ್,ಪ್ರಚಾರ ಸಮಿತಿ ಅಧ್ಯಕ್ಷರುಗಳಾದ ಜಿ. ಜನಾರ್ಧನ್, ಎ. ಆನಂದ್, ಪರಿಸರ ರಾಮಕೃಷ್ಣ, ಮಂಜುನಾಥ್,ವೆಂಕಟೇಶ್, ಅನಿಲ್, ಪುಟ್ಟರಾಜು,ಚೇತನ್, ಸತೀಶ್ ಗೌಡ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ  ಭಾಗವಹಿಸಿದ್ದರು.

Post a Comment

0 Comments

Ad Code

Responsive Advertisement