ವರದಿ : ಚಿಕ್ಕತೇಕಹಳ್ಳಿ ಡಿ ಶಿವಕುಮಾರ್
ಶಿಡ್ಲಘಟ್ಟ: ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ ಹಾಗಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಿ ಪ್ರಾಣದಾತರಾಗಬೇಕು ಎಂದು ತಾಲೂಕು ಗ್ರಾಮಾಂತರ ಮಂಡಲಾಧ್ಯಕ್ಷರಾದ ಸುರೇಂದ್ರಗೌಡ ಅಭಿಪ್ರಾಯಪಟ್ಟರು.
ಅಬ್ಲೂಡು ಗ್ರಾಮ ಪಂಚಾಯಿತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಜೆಪಿ ಆಯೋಜಿಸಿದ್ದ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ಭಗತ್ ಸಿಂಗ್ ರವರ ಜನ್ಮದಿನದ ಅಂಗವಾಗಿ ರಾಷ್ಟ್ರೋತ್ಥಾನ ರಕ್ತನಿಧಿ ಬೆಂಗಳೂರು ಇವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಅಪಘಾತ ಹೆರಿಗೆ ಸೇರಿ ನಾನಾ ಸಂದರ್ಭದಲ್ಲಿ ರಕ್ತಕ್ಕೆ ರಕ್ತವೇ ಪರಿಹಾರ ಹೊರತಾಗಿ ಬೇರಾವುದೂ ಇಲ್ಲ. ವೈಜ್ಞಾನಿಕವಾಗಿ ಜಗತ್ತು ಎಷ್ಟೇ ಮುಂದುವರಿದಿದ್ದರೂ ಮಾನವ ದೇಹದ ಹೊರತಾಗಿ ರಕ್ತ ಉತ್ಪಾದಿಸಲು ಸಾಧ್ಯವಿಲ್ಲ ಎಂದು ಧೃಡಪಟ್ಟಿದೆ. ಪ್ರತಿಯೊಬ್ಬರೂ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು.18 ರಿಂದ 60 ವರ್ಷ ವಯಸ್ಸಿನ ಆರೋಗ್ಯವಂತ ಪುರುಷರು ಹಾಗೂ ಮಹಿಳೆಯರು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದು ರೂಡಿಸಿಕೊಳ್ಳಬೇಕು ಎಂದು ಬಿ ಜೆಪಿ ಜಿಲ್ಲಾ ಕಾರ್ಯದರ್ಶಿ ದೇವರಾಜ್ ತಿಳಿಸಿದರು.
ಈ ಸಂದರ್ಭದಲ್ಲಿ ಗುಡಿಹಳ್ಳಿ ಮಂಜುನಾಥ್, ಜಯಸಿಂಹ, ರಜನಿಕಾಂತ್ ಬಾಬು ,ನರೇಶ್,ನಟರಾಜ್, ನರ್ಮದಾರೆಡ್ಡಿ ಹಾಗೂ ಪಕ್ಷದ ಕಾರ್ಯಕರ್ತರು ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಉಪಸ್ಥಿತರಿದ್ದರು.
0 Comments