ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸಂಘದ ಮನವಿ ಮೇರೆಗೆ ಮಂಡ್ಯದ ಹಿರಿಯ ಪತ್ರಕರ್ತ ಪಿ.ಜೆ. ಚೈತನ್ಯ ಕುಮಾರ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಕನ್ನಡ ಪ್ರಭ, ಪ್ರಜಾವಾರ್ತೆ ಸೇರಿದಂತೆ ಹಲವು ಪತ್ರಿಕೆಯಲ್ಲಿ ಕೆಲಸ ಮಾಡಿದ್ದ ಚೈತನ್ಯ ಕುಮಾರ್ ಅವರುಅ ಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದರು.
ಚಿಕಿತ್ಸೆಗಾಗಿ ಸುಮಾರು 15 ಲಕ್ಷಕ್ಕೂ ಹೆಚ್ಚು ಖರ್ಚು ಮಾಡಿಕೊಂಡಿದ್ದರು.
ಚೈತನ್ಯ ಕುಮಾರ್ ರ ವರು ಸಂಕಷ್ಟದಲ್ಲಿರುವ ಕಾರಣ ಆ ಕುಟುಂಬಕ್ಕೆ ಆರ್ಥಿಕ ನೆರವು ಕೊಡಿಸುವಂತೆ ಮಂಡ್ಯ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಕೆಯುಡಬ್ಲ್ಯೂಜೆಗೆ ಮನವಿ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ನೆರವು ಕೋರಿದ್ದರು.
ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿರುವ ಸಿಎಂ, ಮಾನವೀಯ ದೃಷ್ಟಿಯಿಂದ 2 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
0 Comments