ಚಿಕ್ಕಬಳ್ಳಾಪುರ: ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ಜಿಲ್ಲೆಯ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲೆಯ ಅರ್ಹ ಕ್ರೀಡಾಪಟುಗಳಿಗಾಗಿ (2022-23 ಸಾಲಿನಲ್ಲಿ)ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಕ್ರೀಡಾಪಟುಗಳು ದಿನಾಂಕ: 20/10/2022 ರ ಒಳಗಾಗಿ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಅರ್ಜಿ ನಮೂನೆಗಳು ಹಾಗೂ ಮಾರ್ಗಸೂಚಿಗಳನ್ನು ಪಡೆದು ದಿನಾಂಕ: 28/10/2022 ಒಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲಾ ಕಚೇರಿಯಲ್ಲಿ ಕಚೇರಿಯ ಸಲ್ಲಿಸಬೇಕು ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲಾ ಕಚೇರಿಯಲ್ಲಿ ಅಥವಾ ದೂರವಾಣಿ ಸಂಖ್ಯೆ: 08156-27054 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಜಯಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 Comments