ಬೆಂಗಳೂರು : ನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ವಿ. ಸೋಮಣ್ಣ ಅಭಿನಂದನಾ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿ. ಸೋಮಣ್ಣ ಅವರ ಅಭಿನಂದನಾ ಗ್ರಂಥ ‘’ವಿಜಯ ಪಥ’’ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದ ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ ಅಭಿನಂದನಾ ಸಮಿತಿ ಅಧ್ಯಕ್ಷ ಡಾ:ಸಿ.ಸೋಮಶೇಖರ್, ಮಾಜಿ ಪಾಲಿಕೆ ಸದಸ್ಯರುಗಳಾದ ಎ.ಹೆಚ್.ಬಸವರಾಜ್ ಮುಂತಾದ ಅನೇಕ ಗಣ್ಯರು ಉಪಸ್ಥಿತರಿದ್ದು, ಈ ಸಂದರ್ಭದಲ್ಲಿ ಸೋಮಣ್ಣನವರಿಗೆ ಅಭಿನಂದಿಸಿದರು.
ಕಾರ್ಯಕ್ರಮಕ್ಕೆ ರಾಜ್ಯದ ನಾನಾ ಕಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದ ಅಭಿಮಾನಿಗಳು ಹಾಗೂ ಬೆಂಬಲಿಗರು ತಮ್ಮ ನೆಚ್ಚಿನ ನಾಯಕನಿಗೆ ಹೂಗುಚ್ಛ ನೀಡಿ ಶಾಲುಗಳನ್ನು ಹೊದಿಸಿ ಶುಭಕೋರಿದರು.

0 Comments