ಮೈಸೂರು ಜಿಲ್ಲೆ:ವರುಣಾ ವಿಧಾನಸಭಾ ಕ್ಷೇತ್ರದ, ಕೀಳನಪುರ ಗ್ರಾಮ ಪಂಚಾಯಿತಿ ಮತ್ತು ಮಾಧವಗೆರೆ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿ ಪೂಜಾ ಕಾರ್ಯಕ್ರಮ ಮತ್ತು ರಸ್ತೆ ಕಾಮಗಾರಿ ಹಾಗೂ ಒಂಟಿ ಮನೆ ಫಲಾನುಭವಿಗಳಿಗೆ ಆದೇಶ ಪತ್ರವನ್ನು
*ವರುಣಾ ಕ್ಷೇತ್ರದ ಶಾಸಕರಾದ ಡಾ||ಯತೀಂದ್ರ ಸಿದ್ದರಾಮಯ್ಯರವರು ದೀಪಾ ಬೆಳಗಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು*
*ಮಾಜಿ ಆಡಳಿತ ಪಕ್ಷದ ನಾಯಕರಾದ ಎಮ್.ಶಿವರಾಜುರವರು ಭಾಗವಹಿಸಿದ್ದರು*
*ಬಸವೇಶ್ವರ ದೇವಸ್ಥಾನ ಜೀರ್ಣೋದ್ಗಾರಕ್ಕೆ 15ಲಕ್ಷ ರೂಪಾಯಿ ಅನುದಾನ ನೀಡಲಾಯಿತು*
ಇದೇ ಸಂದರ್ಭದಲ್ಲಿ ಶಾಸಕರಾದ *ಯತೀಂದ್ರ ಸಿದ್ದರಾಮಯ್ಯರವರು* ಮಾತನಾಡಿ ಹಿಂದಿನ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಪಕ್ಷಾತೀತವಾಗಿ ರಾಜ್ಯದ ಅಭಿವೃದ್ದಿಗೆ ಅನುದಾನ ನೀಡಿದರು.
ಜನತಗೆ ನೀಡಿದ 165ನೇ ಭರವಸೆಗಳನ್ನು ಪೂರೈಸಿದ ಏಕೈಕ ಸರ್ಕಾರ ನಮ್ಮ ರಾಜ್ಯದ ಕಾಂಗ್ರೆಸ್ ಪಕ್ಷದ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಇಂದಿನ ಬಿ.ಜೆ.ಪಿ.ಸರ್ಕಾರ ಶಾಸಕರಿಗೆ ಅನುದಾನ ನೀಡುವಲ್ಲಿ ತಾರತಮ್ಮ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ಶಾಸಕರಿಗೆ ಅಭಿವೃದ್ದಿ ಕಾಮಗಾರಿಗಳಿಗೆ ಅನುದಾನ ನೀಡುತ್ತಿಲ್ಲ.
ರಾಜ್ಯ ಸರ್ಕಾರ ಜನವಿರೋಧಿ, ಪ್ರಜಾಪ್ರಭುತ್ವ ವಿರೋಧಿ ಆಡಳಿತ ನಡೆಸುತ್ತಿದೆ .2023ರ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಪಕ್ಷ ಸ್ಪಟ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.
*ಪಂಚಾಯಿತಿ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಸದಸ್ಯರು, ಊರಿನ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು*


0 Comments