Ticker

6/recent/ticker-posts

Ad Code

Responsive Advertisement

ಡಿ.3 ರಂದು ವಿಶ್ವ ವಿಕಲಚೇತನರ ದಿನಾಚರಣೆ: ಸ್ವಾಮಿಗೌಡ

ಜಿಲ್ಲಾಡಳಿತದ ಮತ್ತು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಡಿಸೆಂಬರ್ 3 ರಂದು‌ ವಿಶ್ವ ವಿಕಲಚೇತನರ ದಿನಾಚರಣೆಯನ್ನು‌ ಆಚರಿಸಲಾಗುವುದು‌‌ ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಹಿರಿಯ ಸಹಾಯಕರಾದ ಸ್ವಾಮಿಗೌಡ ಅವರು‌ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹುಸಿ ಮಾತನಾಡಿದರು.
ಜಿಲ್ಲೆಯಲ್ಲಿ ವಿಕಲಚೇತನರ ದಿನಾಚರಣೆ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸಬೇಕು, ವಿಕಲಚೇತನರ ಪೋಷಕರು ಕಾರ್ಯಕ್ರಮದಲ್ಲಿ ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಯಾವುದೇ ಲೋಪ ಉಂಟಾಗದ ರೀತಿ ವಹಿಸಿರುವ ಕೆಲಸಗಳ ನಿರ್ವಹಣೆ ಮಾಡಬೇಕು. ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಕೈಜೋಡಿಸಿ ಕಾರ್ಯಕ್ರಮಕ್ಕೆ ಬಂದು ಸ್ಪರ್ಧಿಗಳಿಗೆ ಸ್ಪೂರ್ತಿ ನೀಡಬೇಕು ಎಂದು ಸೂಚನೆ ನೀಡಿದರು.
ಡಿ.03 ರಂದು ಕಲಾಮಂದಿರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯ ವೇದಿಕೆ ಕಾರ್ಯಕ್ರಮ ನಡೆಯಲಿದೆ. ವಿಕಲಚೇತನರಿಗೆ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳ ಮಾಹಿತಿ ನೀಡಬೇಕು ಎಂದರು.
ವಿಕಲಚೇತನರಿಗೆ ಕ್ರೀಡೆ, ಸ್ಪರ್ಧೆಗಳು, ವೇದಿಕೆ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಉಪಹಾರದ ವ್ಯವಸ್ಥೆ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಕರ್ನಾಟಕ ಅಂಗವಿಕಲರ ಒಕ್ಕೂಟದ ರಾಜ್ಯಧ್ಯಾಕ್ಷರಾದ ಡಾ.ಚಲುವರಾಜು ರವರಿಗೆ ಕಾರ್ಯಕ್ರಮವನ್ನು ಕುರಿತು ಉಪನ್ಯಾಸ ನೀಡಲು ಆಹ್ವಾನಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಭರತನಾಟ್ಯ ಕಾರ್ಯಕ್ರಮಗಳನ್ನ ವಿಧ್ಯಾರ್ಥಿಗಳಿಂದ ಆಯೋಜಿಸಲು ವ್ಯವಸ್ಥೆ ಮಾಡಿಕೊಳ್ಳಿ ಎಂದರು.
ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕ ಸಬಲೀಕರಣದ ಅಧಿಕಾರಿ ಆರ್.ರೋಹಿತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಾಗರಾಜು, ವಿವಿಧ ಸಂಸ್ಥೆಯ ಮುಖ್ಯಸ್ಥರಾದ ರವಿಕುಮಾರ್, ಮೀರ ಶಿವಲಿಂಗಯ್ಯ, ಕರ್ನಾಟಕ ಅಂಗವಿಕಲರ ಒಕ್ಕೂಟದ ರಾಜ್ಯಧ್ಯಾಕ್ಷರಾದ ಡಾ.ಚಲುವರಾಜು ಸೇರಿದಂತೆ ಜಿಲ್ಲೆಯ ವಿವಿಧ ಮುಖಂಡರುಗಳು ಉಪಸ್ಥಿತರಿದ್ದರು.

Post a Comment

0 Comments

Ad Code

Responsive Advertisement