Ticker

6/recent/ticker-posts

Ad Code

Responsive Advertisement

ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಕಾನ್ಸ್ಟೇಬಲ್

ದೇವನಹಳ್ಳಿ: ಪ್ರಕರಣ ಕೈಬಿಡುವ ವಿಚಾರಕ್ಕೆ ಸಂಬAಧಿಸಿದAತೆ ಪೊಲೀಸ್ ಕಾನ್ಸ್ಟೇಬಲ್‌ವೊಬ್ಬರು ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.

ಠಾಣೆಯಲ್ಲಿ ದಾಖಲಾಗಿದ್ದ ದೂರಿನ ವಿಚಾರಕ್ಕೆ ಸಂಬAಧಿಸಿದAತೆ ಮಂಡಿಬೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಕ್ಕತತ್ತಮಂಗಲ ಗ್ರಾಮದ ಮಂಜುನಾಥ್ ಎಂಬುವರಿAದ ನಿನ್ನೆ ಸಂಜೆ ೩೦ ಸಾವಿರ ರೂ. ಲಂಚ ಸ್ವೀಕರಿಸುವಾಗ ಚಂದ್ರಶೇಖರ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಹಣದ ಸಮೇತ ವಶಕ್ಕೆ ಪಡೆದುಕೊಂಡು ದೂರು ದಾಖಲಿಸಿಕೊಂಡಿದ್ದಾರೆ.

ಮAಜುನಾಥ್ ಮತ್ತು ಅವರ ಸಹೋದರಿಯ ನಡುವೆ ಹಣಕಾಸಿನ ವಿಚಾರವಾಗಿ ಪೊಲೀ ಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮಂಜುನಾಥ್ ಅವರನ್ನು ವಿಚಾರಣೆಗಾಗಿ ಠಾಣೆಗೆ ಕರೆತಂದು ಸೆಲ್‌ನಲ್ಲಿ ಇರಿಸಲಾಗಿದೆ. ಠಾಣೆಯಿಂದ ಬಿಡುಗಡೆ ಮಾಡಿ ಹೊರಕ ಳುಹಿಸಲು ಕಾನ್ಸ್ಟೇಬಲ್ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಪಟ್ಟಣದ ಶಿವಗಣೇಶ ಸರ್ಕಲ್‌ನಲ್ಲಿರುವ ಹಾಪ್ ಕಾಮ್ಸ್ ಬಳಿ, ಮಂಜುನಾಥ್ ಅವರಿಂದ ಹಣ ಪಡೆದುಕೊಳ್ಳುವಾಗ ದಾಳಿ ನಡೆಸಲಾಗಿದೆ. ಕಾನ್ಸ್ಟೇಬಲ್ ಚಂದ್ರಶೇಖರ್ ಮಾತ್ರವಲ್ಲದೇ ಸಬ್ ಇನ್ಸ್ಪೆಕ್ಟರ್ ಈರಮ್ಮ ಮೇಲೆ ಕೂಡ ದೂರು ದಾಖಲಾಗಿದೆ. ಆದ್ರೆ, ಈರಮ್ಮ ಅವರು ಪ್ರಕರಣದಲ್ಲಿ ನೇರವಾಗಿ ಭಾಗಿ ಯಾಗಿರುವುದು ಮೇಲ್ನೋಟಕ್ಕೆ ಕಂಡುಬAದಿಲ್ಲ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.


Post a Comment

0 Comments

Ad Code

Responsive Advertisement