ಮಾಜಿ ಶಾಸಕ, ಹಿರಿಯ ಕಲಾವಿದ ಕುಂಬಳೆ ಸುಂದರ ರಾಯರ ನಿಧನಕ್ಕೆ ನಳಿನ್ ಕುಮಾರ್ ಸಂತಾಪ
ಬೆಂಗಳೂರು: ಬಿಜೆಪಿಯ ಮಾಜಿ ಶಾಸಕ ಹಾಗೂ ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ ಕುಂಬಳೆ ಸುಂದರ ರಾಯರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಸಂತಾಪ ಸೂಚಿಸಿದ್ದಾರೆ.
ಕುಂಬಳೆ ಸುಂದರ ರಾಯರು ಬಿಜೆಪಿಯ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಮಹಾನ್ ಕಲಾವಿದರಾದ ಅವರ ಆತ್ಮೀಯ ಒಡನಾಟ ಮರೆಯಲಾಗದು. ಹಿರಿಯರಾದ ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಭಗವಂತನಲ್ಲಿ ಬೇಡಿಕೊಳ್ಳುವೆ. ಅವರ ಕುಟುಂಬ, ಬಂಧುವರ್ಗ, ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ ಎಂದು ನಳಿನ್ ಕುಮಾರ್ ಕಟೀಲ್ ಅವರು ಪ್ರಾರ್ಥಿಸಿದ್ದಾರೆ.

0 Comments