Ticker

6/recent/ticker-posts

Ad Code

Responsive Advertisement

ಚಿಲುಮೆ ಸಂಸ್ಥೆ ಮೇಲೆ ಯಾಕೆ ದಾಳಿ ನಡೆಸಿಲ್ಲ: ಸರ್ಕಾರದ ವಿರುದ್ಧ ಸಿದ್ದು ವಾಗ್ದಾಳಿ

ಬೆಂಗಳೂರು: ಚಿಲುಮೆ ಸಂಸ್ಥೆಯ ಅಕ್ರಮಗಳ ಹಿಂದಿನ ರೂವಾರಿಗಳ ಮೇಲೆ ಯಾವ ಕ್ರಮ ತೆಗೆದುಕೊಳ್ಳಲಾಗಿದೆ? ಇಷ್ಟು ದಿನವಾದರೂ ಈ ಅಕ್ರಮ ಸಂಸ್ಥೆಯ ಹಣಕಾಸಿನ ವಹಿವಾಟಿನ ಮೇಲೆ ಈ ಸಂಸ್ಥೆಗೆ ಹಣ ನೀಡಿದವರ ಮೇಲೆ ಯಾಕೆ ಸಿಬಿಐ, ಐಟಿ, ಇಡಿ ದಾಳಿ ನಡೆಸಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಸಂಬಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಖಾಸಗಿ ಸಂಸ್ಥೆ ಚಿಲುಮೆಗೆ ಮತದಾರರ ಪಟ್ಟಿ ಪರಿಷ್ಕರಣೆಗೆ ವಹಿಸಿದ್ದರ ಹಿಂದೆ ಬಿಬಿಎಂಪಿ ಮತ್ತು ಚುನಾವಣಾ ಆಯೋಗದ ಅಧಿ ಕಾರಿಗಳೂ ಇದ್ದಾರೆ. ಚುನಾವಣಾ ಆಯೋಗಕ್ಕೆ ಈ ಕುರಿತು ಮೊದಲೇ ಮಾಹಿತಿ ಇತ್ತು. ಚುನಾವಣಾ ಆಯೋಗ ದವರು ಬಿಬಿಎಂಪಿಗೆ ಈ ಕುರಿತು ಪತ್ರಗಳನ್ನೂ ಬರೆದಿದ್ದರು.
ಆದರೂ ಆಯೋಗಕ್ಕೂ ಕೇರ್ ಮಾಡದೇ ಚಿಲುಮೆ ಸಂಸ್ಥೆಯ ಅಕ್ರಮ ಹೆಚ್ಚಾಗುತ್ತಾ ಹೋಗಿದೆ. ಹಾಗಾಗಿ ಚುನಾ ವಣಾ ಆಯೋಗ ಈ ಅಕ್ರಮಕ್ಕೆ ಮೌನ ಸಮ್ಮತಿ ನೀಡಿದೆಯೆ? ಸುಪ್ರೀಂ ಕೋರ್ಟ್ ಚುನಾವಣಾ ಆಯೋಗದ ಮೇಲೆ ಮಾಡಿರುವ ವಿಮರ್ಶೆಗಳು ಸರಿಯಾಗಿವೆ ಅಲ್ಲವೆ? ಎಂದು ಪ್ರಶ್ನಿಸಿದ್ದಾರೆ.

ಹೊಂಗಸ

ದ್ರದ ಬಿಜೆಪಿಯ ಕಚೇರಿಯಲ್ಲಿ ಹಾಲಿ ಶಾಸಕರು ಹಾಗೂ ವಿಧಾನಸಭೆಯ ಮುಖ್ಯ ಸಚೇತಕ ಸತೀಶ್‌ರೆಡ್ಡಿ ನೇತೃತ್ವದಲ್ಲಿಯೇ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸುವ ಕುರಿತು ತರಬೇತಿ ನೀಡಲಾಗಿದೆ. ಪರಿಷ್ಕರಣೆ ಕಾರ್ಯಕ್ಕಾಗಿಯೆ ೨೫,೦೦೦ ದಿಂದ ೩೦,೦೦೦ ರೂಪಾಯಿಗಳನ್ನು ನೀಡಿ ನೇಮಕಾತಿ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ಹಣದ ಮೂಲದ ಬಗ್ಗೆ ತನಿಖೆ ನಡೆಯಬೇಕು. ನೂರಾರು ಸಂಖ್ಯೆಯ ನೌಕರರಿಗೆ ಸಂಬಳ ಕೊಡಲು ಖರ್ಚು ಮಾಡಿದ ಕೋಟ್ಯಾಂತರ ರೂಪಾಯಿಗಳನ್ನು ಈ ಸಂಸ್ಥೆಗೆ ನೀಡಿದವರು ಯಾರು? ಇಷ್ಟು ದೊಡ್ಡ ಮೊತ್ತವನ್ನು ವಿನಿಯೋಗಿಸುತ್ತಿದ್ದವರ ಉದ್ದೇಶವಾದರೂ ಏನು? ಅಕ್ರಮವಾಗಿ ವಿನಿಯೋಗಿಸಿದ ಹಣದ ಕುರಿತು ಇನ್ನೂ ದಾಳಿಗಳನ್ನು ನಡೆಸದೆ ಐಟಿ, ಇಡಿಗಳು ಯಾಕೆ ಇನ್ನೂ ಕಣ್ಣು ಮುಚ್ಚಿಕೊಂಡಿವೆ? ಬಿಬಿಎಂಪಿಯಲ್ಲಿ ನಡೆದಿರುವ ಮತದಾರರ ಪಟ್ಟಿಯ ಅಕ್ರಮಕ್ಕೆ ಸರ್ಕಾರ, ಚುನಾವಣಾ ಆಯೋಗ ಮತ್ತು ಬಿಬಿಎಂಪಿಯ ಜಿಲ್ಲಾ ಚುನಾವಣಾಧಿಕಾರಿ, ಮತದಾರರ ನೋಂದಣಾಧಿಕಾರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಸಂಪೂರ್ಣ ಜವಾಬ್ಧಾರರಾಗಿರುತ್ತಾರೆ ಎಂದರು.
ಆದರೂ ಇಷ್ಟು ಬೃಹತ್ ಮಟ್ಟದ ಹಗರಣ ನಡೆದಿದ್ದರೂ ಬಿಬಿಎಂಪಿಯ ಹಿರಿಯ ಅಧಿಕಾರಿಗಳು, ಚುನಾವಣಾ ಆಯೋಗದ ಅಧಿಕಾರಿಗಳ ಮೇಲೆ ಯಾಕೆ ಇನ್ನೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಅಕ್ರಮದಲ್ಲಿ ನೇರವಾಗಿ ಭಾಗಿಯಾಗಿರುವ ಬಿಜೆಪಿಯ ಎಂಎಲ್‌ಎಗಳು, ಸಚಿವರುಗಳ ಮೇಲೆ ಮತ್ತು ಬೆಂಗಳೂರು ಅಭಿವೃದ್ಧಿಯ ಉಸ್ತುವಾರಿ ಹೊತ್ತಿರುವ ಮುಖ್ಯಮಂತ್ರಿಗಳ ಮೇಲೆ ಏಕೆ ಯಾವುದೇ ಕ್ರಮ ವಹಿಸಿಲ್ಲ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಸರ್ಕಾರಿ / ಅರೆ ಸರ್ಕಾರಿ ನೌಕರರನ್ನು ನೇಮಿಸುವುದರ ಬದಲಿಗೆ ಖಾಸಗಿ ವ್ಯಕ್ತಿಗಳನ್ನು ಬಿಎಲ್‌ಒ ಗಳಾಗಿ ನೇಮಕ ಮಾಡಲಾಗಿದೆ. ಖಾಸಗಿ ವ್ಯಕ್ತಿಗಳನ್ನು ಯಾವ ಕಾರಣಕ್ಕೂ ನೇಮಕ ಮಾಡಬಾರದು ಎಂದು ಕಾನೂನು ಹೇಳುತ್ತದೆ. ಇವರು ಒಂದು ಪಕ್ಷದ ಕಾರ್ಯಕರ್ತರಂತೆ ಕಾಣಿಸುತ್ತಾರೆ. ಚಿಲುಮೆ ಸಂಸ್ಥೆಯ ಕಚೇರಿಗಳಲ್ಲಿ ಸಚಿವರ ಚೆಕ್ಕುಗಳು ಮತ್ತು ಲೆಟರ್ ಹೆಡ್‌ಗಳು ದೊರೆತಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಗಿದ್ದರೆ ಸದರಿ ಸಚಿವರ ಮೇಲೆ ಯಾಕೆ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಕೇಳಿದ್ದಾರೆ.
ಘೋರವಾದ ಅಪರಾಧ: ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು, ಸೇರಿಸಲು ಯಾವುದೇ ಅರ್ಜಿ ನಮೂನೆಗಳನ್ನು ಪಡೆಯದೆ ಈ ಕೃತ್ಯ ಎಸಗಿರುವುದು ಘೋರವಾದ ಅಪರಾಧವಾಗಿದ್ದು, ಇದನ್ನು ಪ್ರತಿದಿನ ಸಾಕ್ಷಿಗಳ ಸಮೇತ ಜನರು ಮಾಧ್ಯಮಗಳ ಮುಂದೆ ಹೇಳುತ್ತಿದ್ದಾರೆ. ಆದ್ದರಿಂದ ಈ ಕೂಡಲೆ ಜನರು ನೀಡಿ ರುವ ನಮೂನೆ ೬, ೭, ೮, ಮತ್ತು ೮ಎ ಗಳ ಅರ್ಜಿಗಳನ್ನು ಸಾರ್ವಜನಿಕರ ವೀಕ್ಷ ಣೆಗೆ ಲಭ್ಯ ಇರುವಂತೆ ನೋಡಿಕೊಳ್ಳಬೇಕು.
ಸಾರ್ವಜನಿಕರಿಗೆ ತಿಳಿಸಬೇಕು: ಯಾವುದೇ ಅರ್ಜಿಗಳಿಲ್ಲದೇ ಮತದಾರರ ಪಟ್ಟಿಗೆ ಸೇರಿಸಿರುವ, ಕೈಬಿಟ್ಟಿರುವ, ತಿದ್ದುಪಡಿ ಮಾಡಿರುವ, ವರ್ಗಾವಣೆ ಮಾಡಿರುವ ಪ್ರಕರಣಗಳೆಷ್ಟು ಎಂಬುದನ್ನು ಚುನಾವಣಾ ಆಯೋಗ ಈ ಕೂಡಲೇ ಎಲ್ಲ ರಾಜಕೀಯ ಪಕ್ಷಗಳಿಗೆ, ಸಾರ್ವಜನಿ ಕರಿಗೆ ತಿಳಿಸಬೇಕು. ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸದೇ, ನೋಟಿಸ್ ನೀಡದೆ ಮಾಡಿರುವ ಎಲ್ಲ ಬದಲಾವಣೆಗಳನ್ನು ಈ ಕೂಡಲೇ ರದ್ದು ಮಾಡಬೇಕು.
ಜೈಲಿಗೆ ಅಟ್ಟಬೇಕು: ಅರ್ಜಿ ಸ್ವೀಕರಿಸದೇ, ನೋಟೀಸ್ ನೀಡದೆ, ಅರ್ಜಿಗಳ ಮೇಲೆ ಆದೇಶವನ್ನೂ ಮಾಡದೆ ಮತದಾರರ ಪಟ್ಟಿಗೆ ಸೇರಿಸಿರುವ, ತೆಗೆದಿರುವ, ವರ್ಗಾವಣೆ ಮಾಡಿರುವ ಎಲ್ಲ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಜೈಲಿಗೆ ಅಟ್ಟಬೇಕು. ನಿಷ್ಪಕ್ಷಪಾತವಾಗಿ ವರ್ತಿಸದ ಅಧಿಕಾರಿ ಗಳನ್ನು ಈ ಕೂಡಲೇ ಚುನಾವಣಾ ಕರ್ತವ್ಯಗಳಿಂದ ಬಿಡುಗಡೆಗೊಳಿಸಬೇಕು.
ಪ್ರಜಾಪ್ರಭುತ್ವದ ಉಳಿವಿಗಾಗಿ ಮತದಾನ ವ್ಯವಸ್ಥೆಯ ಪಾವಿತ್ರ‍್ಯವನ್ನು ಉಳಿಸಲು ಕಾಂಗ್ರೆಸ್ ಹೋರಾಟ ಪ್ರಾರಂಭಿಸಿದ ಕೂಡಲೇ ಬಿಜೆಪಿಯ ಕೆಲವರು ೨೦೧೭ರ ದಾಖಲೆಯನ್ನು ಬಿಡುಗಡೆ ಮಾಡುತ್ತಿದ್ದೇವೆ. ಚಿಲುಮೆ ಸಂಸ್ಥೆಯನ್ನು ಬೆಳೆಸಿದ್ದೇ ಕಾಂಗ್ರೆಸ್ ಎಂದು ಸುಳ್ಳು ಹೇಳಲಾರಂಭಿಸಿದ್ದಾರೆ. ಇದಕ್ಕಾಗಿ ಮಹದೇವಪುರದ ಸಹ ಕಂದಾಯಾಧಿಕಾರಿ ಆದೇಶ ನೀಡಿದ್ದಾರೆಂಬ ಆದೇಶ ಪ್ರತಿಯನ್ನು ತೋರಿಸುತ್ತಿದ್ದಾರೆ ಎಂದಿದ್ದಾರೆ.
ಕAದಾಯಾಧಿಕಾರಿ ಸಹಿ ಮಾಡಿದ್ದಾರೆ: ಮಹದೇವಪುರದಲ್ಲಿರುವುದು ಬಿಜೆಪಿ ಪಕ್ಷದ ಎಂಎಲ್‌ಎ. ಬಿಜೆಪಿ ಪಕ್ಷದವರು ಇರುವ ಕಡೆಯೆ ಇದನ್ನು ಪ್ರಾರಂಭಿಸಿದ್ದಾರೆ. ಚಿಲುಮೆ ಸಂಸ್ಥೆಗೆ ಆದೇಶ ನೀಡಿದ್ದಾರೆ ಎಂದು ಬಿಜೆಪಿಯವರು ತೋರಿಸುತ್ತಿರು ವುದರಲ್ಲಿ ಸಹ ಕಂದಾಯಾಧಿಕಾರಿ ಸಹಿ ಮಾಡಿದ್ದಾರೆ. ಅದರಲ್ಲಿ ಉಲ್ಲೇಖ ೯-೭-೨೦೧೭ ರಂದು ಚಿಲುಮೆ ಸಂಸ್ಥೆ ನೀಡಿರುವ ಮನವಿ ಎಂದಿದೆ.
ಈ ಅರ್ಜಿ ಸಾಚಾ ಆಗಿದೆಯೆ? ಆಗಿದ್ದರೆ ಬಿಜೆಪಿ ಎಂಎಲ್‌ಎ ಇರುವ ಕಡೆಯೆ ಇದು ಯಾಕೆ ಸಂಭವಿಸಿದೆ? ಆ ಅಧಿಕಾರಿಯ ಮೇಲೆ ಯಾರ ಒತ್ತಡವಿತ್ತು? ಬೂತ್ ಮಟ್ಟದ ಅಧಿಕಾರಿಯನ್ನು ನೇಮಿಸಲು ಸಹ ಕಂದಾಯಾಧಿಕಾರಿಗೆ ಯಾವುದೇ ಅಧಿಕಾರವಿಲ್ಲ ಎಂದು ಪ್ರಜಾಪ್ರತಿನಿಧಿ ಕಾಯ್ದೆ-೧೯೫೦ ಹೇಳುತ್ತದೆ. ಹಾಗಾಗಿ, ಬಿಜೆಪಿಯವರು ಒಬ್ಬ ಸಣ್ಣ ಅಧಿಕಾರಿ ಮೇಲೆ ಪ್ರಭಾವ ಬೀರಿ ಅಕ್ರಮವಾಗಿ ಆದೇಶ ಕೊಡಿಸಿದ್ದಾರೆಯೆ ಎಂಬುದನ್ನೂ ಪರಿಶೀಲಿಸಬೇಕಲ್ಲವೆ?
ಎಲ್ಲರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು: ಯಾವ ವರ್ಷದಿಂದ ಅಕ್ರಮಗಳಾಗಿವೆಯೊ ಆ ವರ್ಷದಿಂದ ಪ್ರತಿಯೊಂದು ಸೇರ್ಪಡೆ, ಪ್ರತಿಯೊಂದು ತೆಗೆಯುವಿಕೆಯನ್ನು ಚುನಾವಣಾ ಆಯೋಗವು ಖುದ್ದು ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು. ಅದುವರೆಗೂ ಈಗ ಸಿದ್ಧಪಡಿಸಿರುವ ಮತದಾರರ ಪಟ್ಟಿಯನ್ನು ಪ್ರಕಟ ಮಾಡದೇ ತಡೆ ಹಿಡಿಯಬೇಕು. ಭಾಗಿಯಾದ ಎಲ್ಲರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಚಿಲುಮೆ ಸಂಸ್ಥೆಗೆ ಹಣ ನೀಡಿರುವ ವರು ಯಾರು? ಯಾಕಾಗಿ ಅವರಿಗೆ ಹಣ ನೀಡುತ್ತಿದ್ದರು? ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅವರ ಹಿಂದೆ ಯಾರ್ಯಾರು ಇದ್ದಾರೆ? ಸಂಸ್ಥೆಯವರು ಯಾರೊಂದಿಗೆ ಸಂಪರ್ಕದಲ್ಲಿದ್ದರು? ಅವರ ನಡುವೆ ನಡೆದ ಸಂವಹನಗಳೇನು? ಸಂವಾದಗಳೇನು? ಇವೆಲ್ಲ ಅಂಶಗಳನ್ನು ತನಿಖೆ ಮಾಡಿ ಸಾರ್ವಜನಿಕರ ಮುಂದೆ ಇಡಬೇಕಾಗಿದೆ.
ನಿರ್ದಾಕ್ಷಿಣ್ಯವಾದ ಕ್ರಮ ತೆಗೆದುಕೊ ಳ್ಳಬೇಕು: ಹಾಗೆಯೆ ರಾಜ್ಯದಲ್ಲಿ ಎಲ್ಲೆಲ್ಲಿ ಹೀಗಾಗಿದೆ ಎಂಬ ಮಾಹಿತಿಯನ್ನೂ ಆಯೋ ಞಗವು ಸ್ಪಷ್ಟಪಡಿಸಬೇಕು. ಮತದಾರರ ಪಟ್ಟಿಗಳ ಪರಿಷ್ಕರಣೆಯ ಮೇಲೆ ನಿಗಾವಹಿಸಬೇಕಾದ ಎಲೆಕ್ಟೋರಲ್ ರೋಲ್ ಅಬ್ಸರ್ವರ್ ಗಳು ಏನು ಮಾಡಿ ದ್ದಾರೆ ? ಅವರು ನಿರ್ಲಕ್ಷ್ಯ ವಹಿಸಿದ್ದರೆ, ಪಕ್ಷಪಾತ ಮಾಡಿದ್ದರೆ ಅವರ ಮೇಲೆಯೂ ನಿರ್ದಾಕ್ಷಿಣ್ಯವಾದ ಕ್ರಮ ತೆಗೆದುಕೊಳ್ಳಬೇಕು.

Post a Comment

0 Comments

Ad Code

Responsive Advertisement