Ticker

6/recent/ticker-posts

Ad Code

Responsive Advertisement

ಪೊಲೀಸರ ಮೇಲೆ ಹಲ್ಲೆಗೆ ಯತ್ನ: ಆರೋಪಿಗೆ ಗುಂಡೇಟು

ನೆಲಮAಗಲ: ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕು ಮಾದವಾರದ ನವಿಲೆ ಬಡಾವಣೆಯಲ್ಲಿ ಫೈರಿಂಗ್ ನಡೆದಿದೆ.


ಕೊಲೆ ಕೃತ್ಯದ ಆಯುಧ ಮಹಜರು ವೇಳೆ ಪೊಲೀಸರ ಮೇಲೆ ಲಾಂಗ್ ಬೀಸಲು ಯತ್ನಿಸಿದ್ದ ಕೊಲೆ ಆರೋಪಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಮಾಚೋಹಳ್ಳಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿ ರಾಜರಾಜನ್ ಅಲಿಯಾಸ್ ಸೇಠು ಎಂಬಾತನ ಕಾಲಿಗೆ ಮಾದನಾಯಕನಹಳ್ಳಿ ಇನ್ಸ್ಪೆಕ್ಟರ್ ಫೈರಿಂಗ್ ಮಾಡಿದ್ದಾರೆ.
ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಬಾಲದಂಡಿ
ರಾಜರಾಜನ್ ನವೆಂಬರ್ ೧೫ರಂದು ರೌಡಿಶೀಟರ್ ನಟರಾಜ ಅಲಿಯಾಸ್ ಮುಳ್ಳು ಎಂಬಾತನನ್ನು ಹತ್ಯೆ ಮಾಡಿದ್ದ. ಪ್ರಕರಣ ಸಂಬAಧ ಆರೋಪಿಯನ್ನು ಮಾದನಾಯಕನಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದರು. ಕೃತ್ಯಕ್ಕೆ ಬಳಸಿದ ಲಾಂಗ್ ವಶಕ್ಕೆ ಪಡೆಯಲು ಪೊಲೀಸರು ಸ್ಥಳಕ್ಕೆ ತೆರಳಿದ್ದಾಗ ಪೊಲೀಸರ ಮೇಲೆ ಲಾಂಗ್ ಬೀಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Post a Comment

0 Comments

Ad Code

Responsive Advertisement