ಬೆಂಗಳೂರು : ನಗರದ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಭಾನುವಾರದಂದು ಕರ್ನಾಟಕ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ 67 ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಸಮಾಜ ಸೇವಾ ರಂಗದಲ್ಲಿ ಸಲ್ಲಿಸುತ್ತಿರುವ ಅನುಪಮ ಸೇವೆಗಾಗಿ ಶ್ರೀ ಜಗದ್ಗುರು ಪ್ರತಿಷ್ಠಾನ ಸಂಸ್ಥಾಪಕರುಗಳಾದ ಡಾ. ಜಿ.ಎಸ್.ಚೌಧರಿ ಹಾಗೂ ಎನ್.ಆರ್. ಪರಮೇಶ್ವರಯ್ಯ ರವರುಗಳಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವೆಲ್ಪೇರ್ ಅಸೊಶಿಯೇಶನ್ ಸದಸ್ಯರು ಹಾಗೂ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

0 Comments