Ticker

6/recent/ticker-posts

Ad Code

Responsive Advertisement

ರಾಯರ ಮಠದಲ್ಲಿ ರಥೋತ್ಸವ, ದಾಸವಾಣಿ

ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ನವೆಂಬರ್ 10, ಗುರುವಾರ ಬೆಳಗ್ಗೆ ಪಂಚಾಮೃತ ಅಭಿಷೇಕ, ಅಲಂಕಾರ, ಮಹಾಮಂಗಳಾರತಿ, ಅನ್ನದಾನ ಸೇವೆ ಜರುಗಿದವು.

 ಸಂಜೆ ರಥೋತ್ಸವ, ಗಜವಾಹನೋತ್ಸವ, ಪಲ್ಲಕ್ಕಿ ಉತ್ಸವ, ತೊಟ್ಟಿಲು ಸೇವೆ, ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆದವು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಮತಿ ಪದ್ಮಾ ಶ್ರೀಧರ್ ಮತ್ತು ಶ್ರೀಮತಿ ಪ್ರಭಾ ಕುಲಕರ್ಣಿ ಅವರು ದಾಸವಾಣಿ ಕಾರ್ಯಕ್ರಮದಲ್ಲಿ ಹರಿದಾಸರ ಅಪರೂಪದ ಕೃತಿಗಳನ್ನು ಪ್ರಸ್ತುತ ಪಡಿಸಿದರು.

 ಶ್ರೀ ಅಮಿತ್ ಶರ್ಮಾ ಕೀ-ಬೋಡ್೯ ವಾದನದಲ್ಲಿ,ಶ ಶ್ರೀ ಶ್ರೀನಿವಾಸ ಕಾಖಂಡಕಿ ತಬಲಾ ವಾದನದಲ್ಲಿ ಸಾಥ್ ನೀಡಿದರು. ಪ್ರಧಾನ ಅರ್ಚಕರಾದ ಶ್ರೀ ನಂದಕಿಶೋರ್ ಆಚಾರ್ ಅವರು ವಂದನಾರ್ಪಣೆ ಮಾಡಿ ನಂತರ ಗುರುಗಳ ಪ್ರಸಾದ ನೀಡಿದರು.

Post a Comment

0 Comments

Ad Code

Responsive Advertisement