ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಡಿಸೆಂಬರ್ 22, ಗುರುವಾರ ಬೆಳಗಿನ ಧಾರ್ಮಿಕ ಕಾರ್ಯಕ್ರಮಗಳಲ್ಲಿ, ಪಂಚಾಮೃತ ಅಭಿಷೇಕ, ಕನಕಾಭಿಷೇಕ, ಅಲಂಕಾರ, ಮಹಾಮಂಗಳಾರತಿ, ಅನ್ನದಾನ ಸೇವೆ ಕಾರ್ಯಕ್ರಮಗಳು ಜರುಗಿದವು.
ಸಂಜೆಯ ಕಾರ್ಯಕ್ರಮಗಳಲ್ಲಿ, ರಥೋತ್ಸವ, ಗಜವಾಹನೋತ್ಸವ, ಪಲ್ಲಕ್ಕಿ ಉತ್ಸವ, ಅಷ್ಟಾವಧಾನ, ತೊಟ್ಟಿಲು ಸೇವೆ, ಮಹಾಮಂಗಳಾರತಿ. ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ವಿನಯಾ ಪ್ರಮೋದ್ ರವರಿಂದ ಹರಿದಾಸ ವಾಣಿ ಗಾಯನ. ವಾದ್ಯ ಸಹಕಾರದಲ್ಲಿ, ವಿ|| ಶ್ರೀ ಎಸ್. ಶಶಿಧರ್ (ಪಿಟೀಲು), ವಿ ಶ್ರೀ ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ) ಅವರು ಸಹಕರಿಸಿದರು. ಈ ಕಾರ್ಯಕ್ರಮದಲ್ಲಿ ಅನೇಕ ಭಕ್ತಾದಿಗಳು ಭಾಗವಹಿಸಿ ಶ್ರೀ ಗುರುರಾಯರ ಕೃಪೆಗೆ ಪಾತ್ರರಾದರು ಎಂದು ಶ್ರೀ ಮಠದ ಪ್ರಧಾನ ಅರ್ಚಕರಾದ ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದರು.

0 Comments