*ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಬೇಡಿಕೆಗಳ ಬಗ್ಗೆ ಚರ್ಚಿಸಲು ಸಚಿವ ಎಂ.ಟಿ.ಬಿ.ನಾಗರಾಜ್ ರವರ ನೇತೃತ್ವದಲ್ಲಿ ಸಭೆ*
ಬೆಳಗಾವಿ : ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಸಭಾ ಅಧಿವೇಶನದ ಸಂದರ್ಭದಲ್ಲಿ, ಕರ್ನಾಟಕ ರಾಜ್ಯ ಪೌರ ನೌಕರರ ಸಂಘದವರು ಸರ್ಕಾರಕ್ಕೆ ಸಲ್ಲಿಸಿದ್ದ ವಿವಿದ ಬೇಡಿಕೆಗಳ ಕುರಿತು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ.ನಾಗರಾಜ್ ರವರ ನೇತೃತ್ವದಲ್ಲಿ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಕು. ಎನ್. ಮಂಜುಶ್ರೀ ರವರ ಉಪಸ್ಥಿತಿಯಲ್ಲಿ ಕರೆಯಲಾಗಿರುವ ಸಭೆಗೆ, ಸಂಘದ ರಾಜ್ಯಾಧ್ಯಕ್ಷರಾದ ಕೆ.ಪ್ರಭಾಕರ್, ಕಾರ್ಯಾಧ್ಯಕ್ಷ ಮುರುಳಿ ಪಿ. ಹಾಗೂ ಇತರೆ ಮುಖಂಡರುಗಳು ಭಾಗವಹಿಸಿದ್ದರು.
-ಚಿತ್ರವರದಿ : ಕೆ.ಸುಕುಮಾರ್ ರಾಜು.


0 Comments