Ticker

6/recent/ticker-posts

Ad Code

Responsive Advertisement

ಪ್ರಧಾನಿ ಮೋದಿ ಆಡಳಿತ ಮೆಚ್ಚಿ ಯುವಕರು ಬಿಜೆಪಿ ಸೇರ್ಪಡೆ: ಕೃಷ್ಣ ಮೂರ್ತಿ

ವಾರ್ತಾ ಜಾಲ ಸುದ್ದಿ ಮಧುಗಿರಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ  ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತವನ್ನು ಮೆಚ್ಚಿ ಯುವ ಜನತೆ ಬಿಜೆಪಿಗೆ ಅಕರ್ಷಿತರಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆಂದು ಬಿಜೆಪಿ ಮುಖಂಡ ಕೃಷ್ಣ ಮೂರ್ತಿ ತಿಳಿಸಿದರು.

ಅವರು ಕೊರಟಗೆರೆ ಕ್ಷೇತ್ರ ವ್ಯಾಪ್ತಿಯ ಪುರವರ ಗ್ರಾಮದ ಮಹಾಶಕ್ತಿ ಕೇಂದ್ರವಾದ ಈಶ್ವರ ದೇವಸ್ಥಾನದಲ್ಲಿ ಶನಿವಾರ ಗೋಪಾಲ್ ರಾವ್ ಮತ್ತು ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ೨೦೨೩ರ ಹೊಸವರ್ಷದ ಕ್ಯಾಲೆಂಡರ್ ಹಾಗೂ ಪಾಕೆಟ್ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಧುಗಿರಿ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದ ಬಿ.ಕೆ. ಮಂಜುನಾಥ್ ಮಾತನಾಡಿ,    ಈ ಕ್ಷೇತ್ರ ದ ಜನತೆ ತಾಲ್ಲೂಕು ಪಂಚಾಯಿತಿ ಸದಸ್ಯರನ್ನಾಗಿ, ಜಿಲ್ಲಾ ಪಂಚಾಯಿತಿ ಸದಸ್ಯರನ್ನಾಗಿಯೂ ಮಾಡಿದ್ದಿರಾ? ಹಾಗೇಯೇ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ನೀಡಿ  ನಮ್ಮ ಪಕ್ಷದ ಅಭ್ಯರ್ಥಿಯನ್ನು ಸಂಸದರನ್ನಾಗಿ ಮಾಡಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಿ ಕ್ಷೇತ್ರದ ಶಾಸಕರನ್ನಾಗಿ ಮಾಡಬೇಕಾಗಿದೆ ಎಂದು ಹೇಳಿದರು.

ಶಿಸ್ತಿನ ಪಕ್ಷವೆಂದರೆ ಅದು ಬಿಜೆಪಿ ಪಕ್ಷ. ಭಾರತೀಯ ಜನತಾ ಪಕ್ಷ ಕಾರ್ಯಕರ್ತರ ಪಕ್ಷವಾಗಿದೆ. ನಮ್ಮ ಪಕ್ಷದಲ್ಲಿ ವ್ಯಕ್ತಿ ಪೂಜೆ ಮಾಡುವುದಿಲ್ಲ. ಯಾವುದೇ ಜಾತಿ, ಧರ್ಮದ ತಾರತಮ್ಯ ವಿರುವುದಿಲ್ಲ. ಎಲ್ಲರಿಗೂ ಸಮಾನ ಅವಕಾಶಗಳಿರುತ್ತವೆ. ಹಾಗಾಗಿಯೇ ಇತ್ತೀಚಿನ ದಿನಗಳಲ್ಲಿ ಯುವಕರು ಬಿಜೆಪಿಯನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಿದರು.

ಕೊರಟಗೆರೆ ತಾಲ್ಲೂಕು ಮಂಡಲದ ಅಧ್ಯಕ್ಷ ಪವನ್ ಕುಮಾರ್ ಮಾತನಾಡಿ  ಪ್ರಪಂಚದಲ್ಲಿಯೇ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿದ ಪಕ್ಷ ಭಾರತೀಯ ಜನತಾ ಪಕ್ಷ. ಪಕ್ಷಕ್ಕಾಗಿ ಶ್ರಮಿಸುವ ತಳಮಟ್ಟದ ಕಾರ್ಯಕರ್ತರನ್ನು ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನಗಳನ್ನು ನೀಡುವ ಪಕ್ಷ ಬಿಜೆಪಿಯಾಗಿದೆ. ಹಾಗಾಗಿ ಇಂದು ಪಕ್ಷಕ್ಕೆ ಸೇರ್ಪಡೆಯಾದ ಎಲ್ಲ ಕಾರ್ಯಕರ್ತರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸಿದರೆ ಮುಂದಿನ ದಿನಗಳಲ್ಲಿ ಪಕ್ಷ ನಿಮಗೆ ಉನ್ನತ ಮಟ್ಟದ ಹುದ್ದೆಗಳನ್ನು ನೀಡಲಿದೆ ಎಂದು ಹೇಳಿದರು.  

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಧುಗಿರಿ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲಿಸಬೇಕು ಎಂದು  ಹೇಳಿದರು.

ಈ ಸಂದರ್ಭದಲ್ಲಿ ಮಧುಗಿರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಕೆ. ಮಂಜುನಾಥ್, ಕೊರಟಗೆರೆ ತಾಲೂಕು ಮಂಡಲದ ಅಧ್ಯಕ್ಷ ಪವನ್ ಕುಮಾರ್, ಮಧುಗಿರಿ ತಾಲೂಕು ಮಂಡಲದ ಅಧ್ಯಕ್ಷ ನರಸಿಂಹಮೂರ್ತಿ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಗೋಪಾಲ್ ರಾವ್, ಬಿಜೆಪಿ ಮುಖಂಡ ದ್ರಾಕ್ಷಾಯಿಣಿ ಕೃಷ್ಣಮೂರ್ತಿ, ಡಾ.ಲಕ್ಷ್ಮಿಕಾಂತ್,  ಮಾಜಿ ಶಾಸಕ ಗಂಗಾ ಹನುಮಯ್ಯ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹುಚ್ಚಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾವಗಡ ರವಿ, ಕಂಬದ ರಂಗಯ್ಯ,  ಕಾರ್ಯಾಲಯ ಕಾರ್ಯದರ್ಶಿ ಸುರೇಶ್, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಸುರೇಂದ್ರ ರೆಡ್ಡಿ, ನಿಕಟ ಪೂರ್ವ ಹೋಬಳಿ ಅಧ್ಯಕ್ಷ ನಂಜುಂಡ ಆರಾಧ್ಯ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಇದ್ದರು.

ವರದಿ:ನಾಗೇಶ್ ಜೀವಾ ಮಧುಗಿರಿ.

Post a Comment

0 Comments

Ad Code

Responsive Advertisement