ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಡಿಸೆಂಬರ್ 1, ಗುರುವಾರ ಬೆಳಗಿನ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಂಚಾಮೃತ ಅಭಿಷೇಕ, ಅಲಂಕಾರ, ಮಹಾಮಂಗಳಾರತಿ, ಅನ್ನದಾನ ಸೇವೆ ಜರುಗಿದವು.
ಸಂಜೆ 6 ಗಂಟೆಗೆ ರಥೋತ್ಸವ, ಗಜವಾಹನೋತ್ಸವ, ಅಷ್ಟಾವಧಾನ, ಮಹಾಮಂಗಳಾರತಿ, ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಮತಿ ಭವಾನಿ ಭುವನ್ ಇವರು "ದಾಸಗಾನಾಮೃತ" ಗಾಯನ ಸೇವೆ ನಡೆಸಿಕೊಟ್ಟರು. ವಿ|| ಶಶಿಧರ್ ಪಿಟೀಲು ವಾದನದಲ್ಲಿ, ವಿ|| ಶ್ರೀನಿವಾಸ್ ಅನಂತರಾಮಯ್ಯ ಮೃದಂಗ ವಾದನದಲ್ಲಿ ಸಾಥ್ ನೀಡಿದರು. ಶ್ರೀ ಮಠದ ಪ್ರಧಾನ ಅರ್ಚಕರಾದ ಶ್ರೀ ನಂದಕಿಶೋರ್ ಆಚಾರ್ ಅವರು ವಂದನಾರ್ಪಣೆ ಮಾಡಿ ನಂತರ ಎಲ್ಲಾ ಕಲಾವಿದರಿಗೂ ಗುರುಗಳ ಪ್ರಸಾದ ನೀಡಿದರು.
ಕನ್ನಡ ರಾಜ್ಯೋತ್ಸವ
ಪ್ರಣವಾಂಜಲಿ ಅಕಾಡೆಮಿ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ಸಂಸ್ಥೆಯು ಕನ್ನಡ ರಾಜ್ಯೋತ್ಸವವನ್ನು ಬನಶಂಕರಿ ಮೊದಲನೇ ಹಂತ, ಶ್ರೀನಿವಾಸನಗರದ ಮುಖ್ಯರಸ್ತೆಯಲ್ಲಿರುವ ಅಚ್ಯುತ ಪಾರ್ಟಿ ಹಾಲ್ ನಲ್ಲಿ ಡಿಸೆಂಬರ್ 3, ಶನಿವಾರ ಸಂಜೆ 6 ಗಂಟೆಗೆ, ಏರ್ಪಡಿಸಿದ್ದು, ಈ ಕಾರ್ಯಕ್ರಮದಲ್ಲಿ ಮಧುರ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಗಾಯನ ಮತ್ತು ಲೋಕೇಶ್ವರ ನಾಟ್ಯ ಟ್ರಸ್ಟ್ ಮಕ್ಕಳಿಂದ ನೃತ್ಯ ಪ್ರದರ್ಶನ ನಡೆಯಲಿದೆ.
ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ 'ಕರ್ನಾಟಕ ಕಲಾಶ್ರೀ' ಪ್ರಶಸ್ತಿ ವಿಜೇತೆ ಶ್ರೀಮತಿ ಮಧುರಾ ರವಿಕುಮಾರ್, ಶ್ರೀಮತಿ ಸುಷ್ಮಾ ಹೆಚ್ ಎಂ ರವರು ಆಗಮಿಸಲಿದ್ದಾರೆ ಎಂದು ಪ್ರಣವಾಂಜಲಿ ಸಂಸ್ಥೆಯ ನಿರ್ದೇಶಕಿ ವಿ|| ಶ್ರೀಮತಿ ಪವಿತ್ರಾ ಪ್ರಶಾಂತ್ ಅವರು ತಿಳಿಸಿದ್ದಾರೆ.



0 Comments