ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ: ಅಗ್ರಹಾರ ದಾಸರಹಳ್ಳಿ ವಾರ್ಡ್ ನಲ್ಲಿ ಲೋಕಾರ್ಪಣೆಗೆ ಸಿದ್ಧಗೊಂಡಿರುವ 300 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ವೀಕ್ಷಿಸಲು ಆದಿಚುಂಚನಗಿರಿ ಪೀಠದ *ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು, ಸ್ಥಳೀಯ ಶಾಸಕರು,ವಸತಿ ಸಚಿವರಾದ ವಿ.ಸೋಮಣ್ಣರವರು ಭೇಟಿ ನೀಡಿ ವೀಕ್ಷಣೆ ಮಾಡಿದರು.
ಬಹುಮಹಡಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜನರಲ್ ಚಕ್ ಅಪ್,ಹೆರಿಗೆ ವಾರ್ಡ್, ಅಪರೇಷನ್ ಥೀಯಟರ್, ಶಿಶುಗಳ ನಿಗಾ ಘಟಕ, ಹೃದಯ, ದಂತ, ಮೂಳೆ, ನೇತ್ರ ತಪಾಸಣೆ ಕೊಠಡಿಗಳು, ಸ್ಕಾನಿಂಗ್ ಅಮ್ಲಜನಕ ಸಂಗ್ರಹ ಕೇಂದ್ರವನ್ನು ವೀಕ್ಷಣೆ ಮಾಡಿದರು.
ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿರವರು ಮಾತನಾಡಿ,, ಬಡವರ ಮಧ್ಯಮವರ್ಗದ ಕುಟುಂಬಗಳಿಗೆ ಆರೋಗ್ಯ ಶಿಕ್ಷಣ ಕಡಿಮೆ ವೆಚ್ಚದಲ್ಲಿ ಲಭಿಸಿದರೆ, ಆರ್ಥಿಕವಾಗಿ ಸಬಲರಾಗುತ್ತಾರೆ.
ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಎಲ್ಲ ಸೌಲಭ್ಯಗಳು ಜನ ಸಾಮಾನ್ಯರ ಆರೋಗ್ಯ ರಕ್ಷಣೆಗೆ ಸ್ಥಾಪನೆಯಾಗುತ್ತಿರುವುದು ಸಂತೋಷದಾಯಕ ವಿಷಯ.
ಪ್ರತಿಯೊಬ್ಬರು ಆರೋಗ್ಯದ ಕಡೆ ಗಮನಹರಿಸಬೇಕು, ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಹೇಳಿದರು.
ಸಚಿವರಾದ ವಿ.ಸೋಮಣ್ಣರವರು ಮಾತನಾಡಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಡವರು, ಮಧ್ಯಮವರ್ಗದವರು ಹೆಚ್ಚಾಗಿರುವ ಪ್ರದೇಶವಾಗಿದೆ.
ಶ್ರೀಮಂತರಿಗೆ ಸಿಗುವ ಹೈಟೆಕ್ ವೈದ್ಯಕೀಯ ಸೌಲಭ್ಯ ಜನಸಾಮಾನ್ಯರಿಗೆ ಲಭಿಸಬೇಕು ಎಂದು 150ಕೋಟಿ ರೂಪಾಯಿ ವೆಚ್ಚದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗಿದೆ.
ಇದೇ ತಿಂಗಳು 31ನೇ ತಾರೀಖು ಸಂಜೆ 5ಗಂಟೆಗೆ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಬಸವರಾಜ್ ಎಸ್.ಬೊಮ್ಮಾಯಿರವರು, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರವರ ಅಮೃತ ಹಸ್ತದಿಂದ ಲೋಕಾರ್ಪಣೆಯಾಗಲಿದೆ ಎಂದು ಹೇಳಿದರು.
ಗೋವಿಂದರಾಜನಗರ ಮಂಡಲ ಬಿ.ಜೆ.ಪಿ.ಅಧ್ಯಕ್ಷರಾದ ವಿಶ್ವನಾಥಗೌಡ, ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ಗಂಗಭೈರಯ್ಯ, ಕೆ.ಉಮೇಶ್ ಶೆಟ್ಟಿ, ಶ್ರೀಮತಿ ರೂಪ ಲಿಂಗೇಶ್ವರ್, ಬಿ.ಜೆ.ಪಿ.ಮುಖಂಡರುಗಳಾದ ಕ್ರಾಂತಿರಾಜು,ಶ್ರೀಧರ್, ರಮೇಶ್,ರಾಜಪ್ಪ ಪಾಲ್ಗೊಂಡಿದ್ದರು.



0 Comments