Ticker

6/recent/ticker-posts

Ad Code

Responsive Advertisement

ಕದ್ರಿ ಶ್ರೀಮಂಜುನಾಥ ದೇವಸ್ಥಾನ ಜಾತ್ರೆಯಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ವಿರೋಧ, ಬ್ಯಾನರ್ ತೆರವುಗೊಳಿಸಿದ ಪೊಲೀಸರು..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗ ಜಾತ್ರೋತ್ಸವ ಸಡಗರ. ಎಲ್ಲಿ ನೋಡಿದರೂ ವಾರ್ಷಿಕ ಉತ್ಸವಗಳ ಸಂಭ್ರಮ. ಒಂದು ಕಡೆಯಲ್ಲಿ ಉತ್ಸವದ ಸಂತೋಷ ಮನೆ ಮಾಡಿದ್ದರೆ ಮತ್ತೊಂದು ಕಡೆ ಮುಸ್ಲಿಂ ವ್ಯಾಪಾರಿಗಳಿಗೆ ಪ್ರತಿ ಜಾತ್ರೆಯಲ್ಲೂ ಬಹಿಷ್ಕಾರದ ಬಿಸಿ ತಟ್ಟಿದೆ. ಇದೀಗ ಮಂಗಳೂರು ನಗರದ ಕದ್ರಿ ಶ್ರೀಮಂಜುನಾಥ ದೇವಸ್ಥಾನದ ಜಾತ್ರೆಯಲ್ಲೂ ಬ್ಯಾನರ್ ಕಾಣಿಸಿಕೊಂಡಿದೆ. ಜ.21 ರವರೆಗೆ ನಡೆಯಲಿರುವ ಕದ್ರಿ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡದಂತೆ ವಿಎಚ್‍ಪಿ-ಬಜರಂಗದಳ ಬ್ಯಾನರ್ ಹಾಕಿದೆ.

Kadri Manjunatha Temple, Mangalore Temple

*ಏನಿದೆ ಬ್ಯಾನರ್ ನಲ್ಲಿ..?*

 ಜ.19ರಂದು ಮಂಗಳೂರು ನಗರದ ಕದ್ರಿ ಶ್ರೀಮಂಜುನಾಥ ದೇವಸ್ಥಾನದ ಜಾತ್ರೆಯಲ್ಲೂ ಬ್ಯಾನರ್ ಕಾಣಿಸಿಕೊಂಡಿದೆ. ಜ.21 ರವರೆಗೆ ನಡೆಯಲಿರುವ ಕದ್ರಿ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡದಂತೆ ವಿಎಚ್‍ಪಿ-ಬಜರಂಗದಳ ಬ್ಯಾನರ್ ಹಾಕಿದೆ. ಅದರಲ್ಲಿ ಕುಕ್ಕರ್ ಬಾಂಬ್ ಸ್ಫೋಟವನ್ನೂ ಉಲ್ಲೇಖ ಮಾಡಲಾಗಿದೆ. ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊದಲು ಟಾರ್ಗೆಟ್ ಮಾಡಿದ್ದೇ ಕದ್ರಿ ಮಂಜುನಾಥ ದೇವಸ್ಥಾನವನ್ನು. ಅಂತಹ ಮನಸ್ಥಿತಿ ಉಳ್ಳವರಿಗೆ ಹಾಗೂ ವಿಗ್ರಹಾರಾಧನೆ ಹರಾಂ ಎಂದು ನಂಬಿರುವ ಯಾರಿಗೂ ಈ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ. ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂದು ಬ್ಯಾನರ್ ಹಾಕಲಾಗಿದೆ. ಈ ಬ್ಯಾನರ್ ಹಾಕಿರೋದನ್ನು ಹಿಂದೂ ಸಂಘಟನೆಗಳು ಸಮರ್ಥಿಸಿಕೊಂಡಿದೆ. ಈ ದೇವಸ್ಥಾನದ ಜಾತ್ರಾ ಸಂದರ್ಭದಲ್ಲಿ ಹಲವು ವರ್ಷಗಳಿಂದಲೂ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದರು. ಆದ್ರೆ ಈ ಬಾರಿ ಎಲ್ಲೆಡೆ ಬಹಿಷ್ಕಾರಗಳು ಆರಂಭಗೊಂಡಿದ್ದರಿಂದ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರಕ್ಕೆ ಬಂದಿಲ್ಲ. ಒಂದೆರಡು ಮಂದಿ ಮುಸ್ಲಿಂ ವ್ಯಾಪಾರಿಗಳು ಜಾತ್ರೆಯಲ್ಲಿ ವ್ಯಾಪಾರ ನಡೆಸಲು ಬಂದಿದ್ದು, ಅವರನ್ನು ಹಿಂದೂ ಸಂಘಟನೆಗಳು ಮನವೊಲಿಸಿ ವಾಪಸ್ ಕಳುಹಿಸಿದ್ದಾರೆ. ಈ ಕ್ಷೇತ್ರ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನವಾಗಿರೋದ್ರಿಂದ ಕ್ಷೇತ್ರದ ಆಡಳಿತ ಮಂಡಳಿಯೂ ಈ ಬ್ಯಾನರ್ ಅಳವಡಿಕೆಗೆ ಸಮ್ಮತಿ ಸೂಚಿಸಿಲ್ಲ. ಹೀಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡೋ ನಿಟ್ಟಿನಲ್ಲಿ ಪೊಲೀಸರು ಬ್ಯಾನರ್‌ಅನ್ನು ತೆರವುಗೊಳಿಸಿದ್ದಾರೆ.

Post a Comment

0 Comments

Ad Code

Responsive Advertisement