ತುಮಕೂರು: ಮೂವರು ಸಹೋದರಿಯರು ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಸೋದರಿಯರನ್ನು ರಂಜಿತಾ(24), ಬಿಂದು(21), ಚಂದನಾ(18) ಎಂದು ಗುರುತಿಸಲಾಗಿದೆ.
ಕಳೆದ
9 ದಿನಗಳ ಹಿಂದೆಯೇ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ
ವಾಸನೆ ಬಂದ ಬಳಿಕ ಪ್ರಕರಣ ಇಂದು(ಜನವರಿ 19) ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಹಲವು
ವರ್ಷಗಳ ಹಿಂದೆಯೇ ತಂದೆ-ತಾಯಿ ಮೃತಪಟ್ಟಿದ್ದರು. ತಂದೆ-ತಂದೆಯನ್ನು ಕಳೆದುಕೊಂಡ
ಅನಾಥರಾಗಿದ್ದ ಸಹೋದರಿಯರು ಅಜ್ಜಿ ಜೊತೆಯಲ್ಲಿ ವಾಸವಿದ್ದರು. ಆದ್ರೆ, ಆಸರೆಯಾಗಿದ್ದ
ಅಜ್ಜಿಯೂ ಸಹ ಇತ್ತೀಚೆಗೆ ಮರಣ ಹೊಂದಿದ್ದರು. ಬಳಿಕ ಸಹೋದರಿಯರು ಮಾನಸಿಕ ಖಿನ್ನತೆಗೆ
ಒಳಗಾಗಿದ್ದರು ಎನ್ನಲಾಗಿದೆ.
ಈ ಸಹೋದರಿಯರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 Comments