ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆಯು ಆರಂಭಗೊಂಡಿತು.
ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಉಪಾಧ್ಯಕ್ಷರು ಮತ್ತು ಕರ್ನಾಟಕದ ಸಹ ಪ್ರಭಾರಿ ಅರುಣಾ ಕುಮಾರಿ, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಮತ್ತು ಡಿ.ವಿ. ಸದಾನಂದಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಆರ್. ಅಶೋಕ್, ಡಾ|| ಸಿ.ಎನ್. ಅಶ್ವತ್ಥನಾರಾಯಣ, ಬಿ. ಶ್ರೀರಾಮುಲು, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾಣಾ ಅವರು ಪಾಲ್ಗೊಂಡರು.


0 Comments