ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಾಳೆ (11-2-2023) ಕರ್ನಾಟಕ ಪ್ರವಾಸ ಮಾಡಲಿದ್ದಾರೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ.
ಫೆ.11ರಂದು ಮಧ್ಯಾಹ್ನ ಅವರು ಪುತ್ತೂರು ತಾಲ್ಲೂಕಿನ ಈಶ್ವರಮಂಗಲದ ಶ್ರೀ ಪಂಚಮುಖಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ದೇವರ ದರ್ಶನ ಪಡೆದು ಪೂಜೆ ನೆರವೇರಿಸಲಿದ್ದಾರೆ. ಬಳಿಕ ಅಲ್ಲಿ ಭಾರತ್ ಮಾತಾ ಮಂದಿರದ ಉದ್ಘಾಟನೆ ನೆರವೇರಿಸುವರು.
ಬಳಿಕ ಪುತ್ತೂರಿಗೆ ತೆರಳುವ ಅವರು ಸಂಜೆ ವಿವೇಕಾನಂದ ಕಾಲೇಜಿನ ಮೈದಾನದಲ್ಲಿ ಕ್ಯಾಂಪ್ಕೊದ ಸ್ವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಮಂಗಳೂರಿನಲ್ಲಿ ಪೂರ್ವನಿಗದಿತ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
0 Comments