ದೊಡ್ಡಬಳ್ಳಾಪುರ (ತೂಬಗೆರೆ): ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ.ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿ ಕೆರೆ ಪುನಶ್ಚೇತನ ಗೊಳಿಸುವ ನಿಟ್ಟಿನೊಳಗೆ ರಾಜ್ಯಾದ್ಯಂತ ಈಗಾಗಲೇ 500ಕ್ಕೂ ಹೆಚ್ಚು ಕೆರೆಗಳ ಹೂಳೇತ್ತಿ ರೈತರ ಕೃಷಿ ಚಟುವಟಿಕೆ ಮತ್ತು ಆರ್ಥಿಕ ಪ್ರಗತಿಗೆ ಪೂಜ್ಯರು ಉತ್ತೇಜನ ನೀಡಿದ್ದಾರೆ ಎಂದು ಜಿಲ್ಲಾ ನಿರ್ದೇಶಕರಾದ ಉಮರಬ್ಬಾ ಹೇಳಿದರು.
ತಾಲೂಕಿನ ತೂಬಗೆರೆ ಹೋಬಳಿಯ ಯದ್ದಲಹಳ್ಳಿ ಗ್ರಾಮದಲ್ಲಿ 6 ಲಕ್ಷ ರೂ.ವೆಚ್ಚದಲ್ಲಿ ಗ್ರಾಮದ ಕೆರೆ ಹೂಳೆತ್ತುವ ಕಾರ್ಯಕ್ಕೆ ಪಂಚಾಯತಿ ಸದಸ್ಯರು ಮತ್ತು ಗ್ರಾಮಸ್ಥರ ಸಹಕಾರದೊಂದಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಕೆರೆ ಹೂಳೆತ್ತುವುದರಿಂದ ಅಂತರ್ಜಲ ಹೆಚ್ಚಳವಾಗಿ, ಕೃಷಿ ಚಟುವಟಿಕೆ ಪ್ರಗತಿಯೊಂದಿಗೆ ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದುವರು ಮತ್ತು ಕೆರೆಯಲ್ಲಿ ಸದಾ ನೀರಿದ್ದರೆ ಜಾನುವಾರುಗಳಿಗೆ, ಪ್ರಾಣಿ-ಪಕ್ಷಿಗಳಿಗೆ ನೀರಿನ ಬವಣೆ ನೀಗಿಸಿಕೊಳ್ಳಲು ಸಹಾಯವಾಗುತ್ತೆ ಹಾಗಾಗಿ ಗ್ರಾಮದ ಪ್ರತಿಯೊಬ್ಬರೂ ಮುತುವರ್ಜಿಯಿಂದ ಕೆಲಸ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಾಜಿ ಶಾಸಕ ಜೆ ನರಸಿಂಹಸ್ವಾಮಿ ಮಾತನಾಡಿ ಪ್ರಾಕೃತಿಕ ಸಂಪನ್ಮೂಲಗಳ ಪೈಕಿ ನೀರು ಅತ್ಯಂತ ಅಮೂಲ್ಯವಾದುದು. ಆದುದರಿಂದ ನೀರಿನ ಎಚ್ಚರಿಕೆಯ ಬಳಕೆಯ ವಿಚಾರದಲ್ಲಿ ಜಾಗೃತಿ ಪ್ರತಿಯೊಬ್ಬರಲ್ಲೂ ಮೂಡಬೇಕು. ನಮ್ಮ ಪೂರ್ವಜರಲ್ಲಿ ಕೆರೆಹೂಳೆತ್ತುವ ಜವಾಬ್ದಾರಿ ಸ್ಥಳೀಯರದ್ದು ಎಂಬ ಭಾವನೆ ಇತ್ತು ಗ್ರಾಮಸ್ಥರೆಲ್ಲ ಸೇರಿ ಕೆರೆಗಳ ಹೂಳೆತ್ತಿ ಕೆರೆಯನ್ನು ಸಂರಕ್ಷಣೆ ಮಾಡುತ್ತಿದ್ದರು. ಆದರೆ ಕಾಲ ಬದಲಾದಂತೆ ಕೆರೆ ಹೂಳೆತ್ತುವ ಹಾಗೂ ಸಂರಕ್ಷಿಸುವ ಜವಾಬ್ದಾರಿ ಸರಕಾರದ್ದು ಎಂಬ ಧೋರಣೆ ಗ್ರಾಮಸ್ಥರಲ್ಲಿ ಮೂಡಿದೆ. ಈ ಧೋರಣೆ ಬದಲಾಗಬೇಕು. ಎಂದು ಅಭಿಪ್ರಾಯ ಪಟ್ಟರು.
ನಂತರ ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಕುಮಾರ್ ಮಾತನಾಡಿ ನಮ್ಮ ಗ್ರಾಮದ ಯದ್ದಲಹಳ್ಳಿ ಕೆರೆಯನ್ನು ಆಯ್ಕೆ ಮಾಡಿಕೊಂಡಿರುವುದು ತುಂಬಾ ಒಳ್ಳೆಯ ವಿಷಯ ಇದರಿಂದ ಗ್ರಾಮಸ್ಥರಿಗೆ ಮತ್ತು ರೈತರಿಗೆ ಅನುಕೂಲವಾಗುತ್ತದೆ. ಆದ್ದರಿಂದ ಪಂಚಾಯಿತಿ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಧರ್ಮಸ್ಥಳ ಸಂಸ್ಥೆ ಅನೇಕ ಒಳ್ಳೆಯ ಕಾರ್ಯಕ್ರಮ ಗಳನ್ನು ಮಾಡುತ್ತಾ ಬಂದಿದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಜನಪರ ಕಾರ್ಯಕ್ರಮಗಳನ್ನು ಮಾಡಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜಿ ನರಸಿಂಹಸ್ವಾಮಿ , ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅರವಿಂದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಗಪ್ಪ, ತೂಬಗೆರೆ ವ್ಯವಸಾಯೋತ್ಪನ್ನ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಮುನಿರಾಜಪ್ಪ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮುನಿ ಅಕ್ಕಯಮ್ಮ ಲಘುಮಯ್ಯ, ವೆಂಕಟೇಶ್ ಟಿವಿ. ಕೆರೆಯ ಅಭಿಯಂತರರು ಅರುಣ್, ಜಿಲ್ಲಾ ಯೋಜನಾಧಿಕಾರಿ ಸುಧಾ ಭಾಸ್ಕರ್ ತೂಬಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ನವೀನ್ ಕುಮಾರ್, ಸದಸ್ಯರಾದ ಕೃಷ್ಣಪ್ಪ, ಗಂಗಾಧರ್, ರವಿಸಿದ್ದಪ್ಪ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಸತ್ಯನಾರಾಯಣ ಗ್ರಾಮದ ಮುಖಂಡರಾದ ವರದರಾಜ್, ಕೃಷ್ಣಚಾರಿ, ಯುವ ಮುಖಂಡರಾದ ಉದಯ್ ಆರಾಧ್ಯ ಮತ್ತು ಕೆರೆ ಸಮಿತಿಯ ಅಧ್ಯಕ್ಷರು ಹಾಗೂ ಸಮಿತಿಯ ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮದ ಮುಖಂಡರು ಪ್ರಗತಿ ಬಂದು ಸ್ವಸಹಾಯ ಸಂಘದ ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು ಯೋಜನೆಯ ಸಿಬ್ಬಂದಿಗಳಾದ ಪ್ರಕಾಶ್ ಮೂರ್ತಿ, ಹಾಗೂ ಗ್ರಾಮದ ಸೇವಾ ಪ್ರತಿನಿಧಿ ಮತ್ತಿತರರಿದ್ದರು.


0 Comments