Ticker

6/recent/ticker-posts

Ad Code

Responsive Advertisement

ಜಯನಗರ ರಾಯರ ಮಠದಲ್ಲಿ ಉತ್ಸವಗಳು ಮತ್ತು ನೃತ್ಯೋತ್ಸವ

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹ ದೊಂದಿಗೆ  ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ , ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಫೆಬ್ರವರಿ 10, ಗುರುವಾರ ಬೆಳಗ್ಗೆ ಪಂಚಾಮೃತ ಅಭಿಷೇಕ ಕನಕಾಭಿಷೇಕ ಅಲಂಕಾರ, ಅನ್ನದಾನ ಸೇವೆ, ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಿ, ಸಂಜೆ ರಥೋತ್ಸವ, ಗಜವಾಹನೋತ್ಸವ, ಪಲ್ಲಕ್ಕಿ ಉತ್ಸವ, ತೊಟ್ಟಿಲು  ಸೇವೆಗಳು ಮತ್ತು ಇಂದಿನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಿನ್ಮಯ "ಭರತನಾಟ್ಯ" ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯೋತ್ಸವ ಕಾರ್ಯಕ್ರಮಗಳು ಬಹಳ ವಿಜೃಂಭಣೆಯಿಂದ ಜರುಗಿದವು‌ ಎಂದು ಶ್ರೀಮಠದ ಅರ್ಚಕರಾದ ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದರು. 

ಈ ಸಂದರ್ಭದಲ್ಲಿ ನೂರಾರು ಭಕ್ತರು ಶ್ರೀ ಗುರುರಾಯರ ಸನ್ನಿಧಿಗೆ ಆಗಮಿಸಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಕಾರ್ಯಕ್ರಮ ದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿ ಗುರುಗಳ ಅನುಗ್ರಹಕ್ಕೆ ಪಾತ್ರರಾದರು.

Post a Comment

0 Comments

Ad Code

Responsive Advertisement