Ticker

6/recent/ticker-posts

Ad Code

Responsive Advertisement

ಯಡಿಯೂರಪ್ಪ ಅವರ ಮನೆ‌ ಮೇಲೆ ಕಲ್ಲು ತೂರಾಟ ಮಾಡಿದ್ದು ಅತ್ಯಂತ ನೋವುಂಟುಮಾಡಿದೆ - ಸಿಎಂ ಬೊಮ್ಮಾಯಿ

ಬೆಂಗಳೂರು: ಎಲ್ಲ ಸಮುದಾಯಗಳನ್ನು ಅತ್ಯಂತ ಪ್ರೀತಿ ವಿಶ್ವಾಸದಿಂದ ತೆಗೆದುಕೊಂಡು ಹೋದವರು ಯಡಿಯೂರಪ್ಪ ಅವರು ತಾಂಡಾ ಅಭಿವೃದ್ಧಿ ನಿಗಮವನ್ನ ಪ್ರಾರಂಭ ಮಾಡಿದ್ದು ಅವರು. ಕೆಲವರ ತಪ್ಪು ಕಲ್ಪನೆಯಿಂದ ಮತ್ತು ಕೆಲವರ ಪ್ರಚೋದನೆಯಿಂದ ಅವರ ನಿವಾಸದ ಮೇಲೆ ಕಲ್ಲುತೂರಾಟವಾಗಿದೆ  ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಅವರು ಅಂಬರೀಶ್ ಸ್ಮಾರಕ ಲೋಕಾರ್ಪಣೆ ಮಾಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಶಿಕಾರಿಪುರಲ್ಲಿ ಹೀಗಾಗಿದೆ ಅಂದರೆ ರಾಜಕೀಯ ದುರುದ್ದೇಶ ಇದೆ. ಯಡಿಯೂರಪ್ಪ ಅವರ ಸೇವೆಯಿಂದ ಅವರಿಗೆ ಅಲ್ಲಿನ ಜನರ ಬೆಂಬಲ ಸದಾ ಇರುತ್ತದೆ. ಅದನ್ನು ಕದಲಿಸಲು‌ ವಿರೋಧ ಪಕ್ಷದವರು ಈ‌ ಕೆಲಸವನ್ನು ಮಾಡಿದ್ದಾರೆ. ಇದು ಅತ್ಯಂತ ಹೀನ ಮತ್ತು ಖಂಡನೀಯ ಕೆಲಸ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಬಂಜಾರ ನಮ್ಮ ಸಮುದಾಯ:

ಬಂಜಾರ ಸಮುದಾಯ ನಮ್ಮ ಬೆಂಬಲಿತ ಸಮುದಾಯ. ಒಂದೂವರೆ ಲಕ್ಷ ಜನರಿಗೆ ಹಕ್ಕು ಪತ್ರ ಕೊಟ್ಟಿದೆ. ಇವತ್ತೂ ಅವರಿಗೆ ಹಕ್ಕು ಪತ್ರಗಳನ್ನು ಕೊಟ್ಟಿದ್ದೇವೆ. ನಮ್ಮನ್ನು ಎಸ್ಸಿ ಪಟ್ಟಿಯಿಂದ ಹೊರಹಾಕುತ್ತಾರೆ ಎನ್ನುವ ಆತಂಕ ಇತ್ತು. ಈ‌ ಬಗ್ಗೆ ಫೆಬ್ರವರಿ ತಿಂಗಳಲ್ಲೇ ಕೇಂದ್ರಕ್ಕೆ ಪತ್ರ ಬರೆದು ಶಾಶ್ವತವಾಗಿ ಇವರನ್ನು ಎಸ್ಸಿ ಪಟ್ಟಿಯಲ್ಲೇ ಇಡಬೇಕು ಎಂದು ಶಿಫಾರಸ್ಸು ಮಾಡಿದ್ದೇವೆ. 

ವರದಿಯನ್ನು ನಾವು ಒಪ್ಪಿಕೊಂಡಿಲ್ಲ:

ಯಾವ ವರದಿಯಲ್ಲಿ ಈ ಬಗ್ಗೆ ಆತಂಕ ಇತ್ತೋ, ಅದನ್ನು ನಾವು ಒಪ್ಪಿಕೊಂಡಿಲ್ಲ. ನಾವು ಕ್ಯಾಬಿನೆಟ್ ಸಬ್ ಕಮಿಟಿ ವರದಿಯಂತೆ 4.5% ಗೆ ಹೆಚ್ಚಳ ಮಾಡಿದ್ದೇವೆ. ಅವರ ಆತಂಕ ದೂರ ಮಾಡಿ ಹೆಚ್ಚಿನ ಮೀಸಲಾತಿ ಕೊಟ್ಟಿದ್ದೇವೆ. ರಾಜಕೀಯ ಪ್ರಚೋದನೆ ಮಾಡುವ ಕೆಲಸ ನಿಲ್ಲಬೇಕು. ಈ ಸಂಬಂಧ ಯಡಿಯೂರಪ್ಪ ಅವರಿಗೆ ಸಂಬಂಧವೇ ಇಲ್ಲ. ಅವರಿಗೆ ಹೀಗೆ ಮಾಡಿದ್ದು ನಿಜಕ್ಕೂ ನೋವು ತರಿಸಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.


ವಿರೋಧ ಪಕ್ಷಗಳ ಪ್ರಚೋದನೆ ಇದೆ:

ವಿರೋಧ ಪಕ್ಷಗಳ ಪ್ರಚೋದನೆಯಿಂದಲೇ ಈ ಘಟನೆ ಇದೆ. ನಮ್ಮ ನೀತಿಯಿಂದ ಇದು ಜರುಗಿಲ್ಲ.‌ ಎಲ್ಲರಿಗೂ ನ್ಯಾಯವನ್ನಯ ಕೊಟ್ಟಿದ್ದೀವಿ. ಇದು ರಾಜಕೀಯ ಪ್ರೇರಿತವಾದ ಘಟನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಹೇಳಿದರು.

Post a Comment

0 Comments

Ad Code

Responsive Advertisement