Ticker

6/recent/ticker-posts

Ad Code

Responsive Advertisement

ಮಲ್ಲೇಶ್ವರ: ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳರವರ ಸುವರ್ಣ ಜನ್ಮೋತ್ಸವ: ಗುರುವಂದನಾ ಕಾರ್ಯಕ್ರಮದಲ್ಲಿ ಅನೂಪ್ ಅಯ್ಯಂಗಾರ್ ಭಾಗಿ

ಮುಂದಿನ ಚುನಾವಣೆಯಲ್ಲಿ ಬ್ರಾಹ್ಮಣರಿಗೆ ಹೆಚ್ಚು ಅವಕಾಶ ನೀಡಬೇಕು – 

ಪಾವಗಡ ಪ್ರಕಾಶ್ ರಾವ್

ಬೆಂಗಳೂರು, ಮಾ, 27; ಮಲ್ಲೇಶ್ವರಂನಲ್ಲಿ ಮಲ್ಲೇಶ್ವರಂ ಬ್ರಾಹ್ಮಣ ಸಭಾ ಮತ್ತು ಮಲ್ಲೇಶ್ವರಂ ಬ್ರಾಹ್ಮಣ ಸಭಾ ಟ್ರಸ್ಟ್ ನಿಂದ ಜಗದ್ಗುರು ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಶ್ರೀಮದುತ್ತರಾದಿಮಠಾಧೀಶರಾದ ಶ್ರೀ 1008 ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳರವರ ಸುವರ್ಣ ಜನ್ಮೋತ್ಸವ [50 ವರ್ಷ] ಅಂಗವಾಗಿ ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮಲ್ಲೇಶ್ವರಂ ಕಾಂಗ್ರೆಸ್ ಅಭ್ಯರ್ಥಿ ಅನೂಪ್ ಅಯ್ಯಂಗಾರ್, ಬ್ರಾಹ್ಮಣ ಮಹಾಸಭಾದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಧಾರ್ಮಿಕ ಚಿಂತಕ ಪಾವಗಡ ಪ್ರಕಾಶ್ ರಾವ್ ಮಾತನಾಡಿ, ರಾಜಕೀಯ ಪಕ್ಷಗಳು ಬ್ರಾಹ್ಮಣ ಸಮುದಾಯಕ್ಕೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಹೆಚ್ಚಿನ ಅವಕಾಶ ಕಲ್ಪಿಸಬೇಕು. ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಬ್ರಾಹ್ಮಣ ಸಮುದಾಯ ಒತ್ತು ನೀಡಬೇಕು. ವಿಶೇಷವಾಗಿ ಮುಂಬರುವ ಚುನಾವಣೆಯಲ್ಲಿ ಬ್ರಾಹ್ಮಣ ಮಹಾಸಭಾ ಪ್ರಮುಖ ಪಾತ್ರ ವಹಿಸಬೇಕು ಎಂದರು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಹಾರನಹಳ್ಳಿ ರಾಮಸ್ವಾಮಿ ಮಾತನಾಡಿ, ಸನಾತನ ಧರ್ಮ ಉಳಿಯಲು ಯತಿವರ್ಯರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ತ್ಯಾಗಕ್ಕೆ ಹೆಸರಾದ ಧರ್ಮ ಉಳಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಹೇಳಿದರು.


 

ಮಲ್ಲೇಶ್ವರಂ ಬ್ರಾಹ್ಮಣ ಸಭಾ ಮತ್ತು ಮಲ್ಲೇಶ್ವರಂ ಬ್ರಾಹ್ಮಣ ಸಭಾ ಟ್ರಸ್ಟ್ ನಿಂದ ಜಗದ್ಗುರು ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಶ್ರೀಮದುತ್ತರಾದಿಮಠಾಧೀಶರಾದ ಶ್ರೀ 1008 ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳರವರ ಸುವರ್ಣ ಜನ್ಮೋತ್ಸವ [50 ವರ್ಷ] ಅಂಗವಾಗಿ ಮಲ್ಲೇಶ್ವರಂನಲ್ಲಿ ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಹಾರನಹಳ್ಳಿ ರಾಮಸ್ವಾಮಿ, ಮಲ್ಲೇಶ್ವರಂ ಕಾಂಗ್ರೆಸ್ ಅಭ್ಯರ್ಥಿ ಅನೂಪ್ ಅಯ್ಯಂಗಾರ್, ಧಾರ್ಮಿಕ ಚಿಂತಕ ಪಾವಗಡ ಪ್ರಕಾಶ್ ರಾವ್, ಬ್ರಾಹ್ಮಣ ಮಹಾಸಭಾದ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 


Post a Comment

0 Comments

Ad Code

Responsive Advertisement