Ticker

6/recent/ticker-posts

Ad Code

Responsive Advertisement

ಜಿಲ್ಲಾಡಳಿತ ವತಿಯಿಂದ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 117 ನೇ ಜನ್ಮ ದಿನಾಚರಣೆ

ವೀರ ಸೇನಾನಿ, ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರ 117 ನೇ ಹುಟ್ಟು ಹಬ್ಬವನ್ನು ಜಿಲ್ಲಾಡಳಿತ ವತಿಯಿಂದ ಸರಳವಾಗಿ ಶುಕ್ರವಾರ ಆಚರಿಸಲಾಯಿತು.

ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದಲ್ಲಿ ನಡೆದ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂನ ಸಂಚಾಲಕರಾದ ಮೇಜರ್(ನಿವೃತ್ತಬಿದ್ದಂಡ ನಂಜಪ್ಪಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ತು ಅಧ್ಯಕ್ಷರಾದ ಅನಿಲ್ ಎಚ್.ಟಿ., ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿಗೌಡಂಡ ಸುಬೇದಾರ್ ತಿಮ್ಮಯ್ಯಇತರರು ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿಗೌರವ ನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಫೀಲ್ಡ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂನ ಸಂಚಾಲಕರಾದ  ಬಿದ್ದಂಡ ನಂಜಪ್ಪ ಅವರು ಅಮರ ಸೇನಾನಿ ಜನರಲ್ ತಿಮ್ಮಯ್ಯ ಅವರು ಹುಟ್ಟಿದ ಮನೆ ಸನ್ನಿಸೈಡ್ ‘ದೇವರ ಮನೆ’ ಇದ್ದಂತೆದೇವಸ್ಥಾನವೆಂದು ಭಾವಿಸುತ್ತೇವೆ ಎಂದು ನುಡಿದರು.

ಜನರಲ್ ತಿಮ್ಮಯ್ಯ ಅವರು ಭಾರತೀಯ ಸೇನೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದರುಭಾರತೀಯ ಸೇನೆಯನ್ನು ಬಲಿಷ್ಠಗೊಳಿಸುವಲ್ಲಿ ಶ್ರಮಿಸಿದ್ದರು ಎಂದು ಅವರು ಸ್ಮರಿಸಿದರು.

ಜನರಲ್ ತಿಮ್ಮಯ್ಯ ಅವರ ಗೌರವರಾರ್ಥ ಸೈಪ್ರಸ್ ದೇಶವು ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆಹಾಗೆಯೇ ಇತ್ತೀಚೆಗೆ ಕೊಲ್ಕತ್ತದಲ್ಲೂ ಸಹ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿರುವುದು ವಿಶೇಷವಾಗಿದೆ ಎಂದು ಅವರು ಸ್ಮರಿಸಿದರು.

ಜನರಲ್ ತಿಮ್ಮಯ್ಯ ಸ್ಮಾರಕ ಭವನವನ್ನು ‘ಜೈsssಸಲ್ಮೇರ್ನ ರಕ್ಷಣಾ ಸಂಗ್ರಹಾಲಯ’ ಮಾದರಿಯಲ್ಲಿ ಅಭಿವೃದ್ಧಿ ಪಡಿಸಬೇಕಿದೆ ಎಂದು ಬಿದ್ದಂಡ ನಂಜಪ್ಪ ಅವರು ಕೋರಿದರು

ಜನರಲ್ ತಿಮ್ಮಯ್ಯ ಅವರಂತಹ ಸೇನಾನಿ ಕಾಣುವುದು ಅಪರೂಪಜನರಲ್ ತಿಮ್ಮಯ್ಯ ಅವರ ಬದುಕೇ ಒಂದು ರೀತಿ ಸೇನೆಯಾಗಿತ್ತು ಎಂದರು

ಸನ್ನಿಸೈಡ್ ಎಂಬ ಮಡಿಕೇರಿಯಲ್ಲಿನ ಮನೆ ತಿಮ್ಮಯ್ಯ ಅವರ ಇತಿಹಾಸ ಮಾತ್ರವಲ್ಲಭಾರತೀಯ ಸೇನೆಯ ಇತಿಹಾಸವನ್ನು ತಿಮ್ಮಯ್ಯ ಮೂಲಕ ತೆರೆದಿಡುವ ಮನೆಯಾಗಿದೆಸನ್ನಿಸೈಡ್ನ ಪ್ರತೀ ಕೋಣೆಯೂ ಸೈನಿಕನ ಕಥೆ ಹೇಳುವಂತಿದೆ ಎಂದರು.

ತಿಮ್ಮಯ್ಯ ಹುಟ್ಟಿದ ಮನೆಯಾದ ಸನ್ನಿಸೈಡ್ನ್ನು ಅಪೂರ್ವ ವಸ್ತುಸಂಗ್ರಹಾಲಯ ಆಗಿಸಬೇಕೆಂಬ ಬಯಕೆಬೇಡಿಕೆ ಅನೇಕ ದಶಕಗಳಿಂದ ಇತ್ತುಅದು 2021  ಫೆಬ್ರವರಿ, 06 ರಂದು ಭಾರತದ ರಾಷ್ಟ್ರಪತಿ ಶ್ರೀ ರಾಮನಾಥ ಕೋವಿಂದ್ ಮ್ಯೂಸಿಯಂನ್ನು ಲೋಕಾರ್ಪಣೆ ಮಾಡುವ ಮೂಲಕ ಈಡೇರಿತು ಎಂದರು.

ವಿದ್ಯಾರ್ಥಿನಿ ಶ್ರೀಶಾ ಮಾತನಾಡಿ ಸ್ವಾತಂತ್ರ್ಯ ಭಾರತದ ಸೇನಾ ದಂಡನಾಯಕರಾಗಿ ಸೈನಿಕರ ನೆಚ್ಚಿನ ಸೇನಾನಿಯಾಗಿದ್ದರು ಎಂದರು.

ಜನರಲ್ ಕೆ.ಎಸ್.ತಿಮ್ಮಯ್ಯ ಅವರು 1906  ಮಾರ್ಚ್, 31 ರಂದು ಕೊಡಂದೇರ ಕುಟುಂಬದ ತಿಮ್ಮಯ್ಯ ಮತ್ತು ಸೀತಮ್ಮ ದಂಪತಿಗೆ ಜನಿಸಿದರುಜನರಲ್ ತಿಮ್ಮಯ್ಯ ಅವರ ಮೂಲ ಹೆಸರು ಸುಬ್ಬಯ್ಯ ಆಗಿದೆ ಎಂದರು

ಬೆಂಗಳೂರಿನ ಬಿಷಪ್ ಕಾಟನ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ತಿಮ್ಮಯ್ಯ ಅವರು ಕ್ರೀಡಾಕೂಟದಲ್ಲಿ ಕ್ರಿಯಾಶೀಲರಾಗಿದ್ದರು ಎಂದರು.

ಸೈನಿಕರ ನಾಡು ಎಂಬ ಕೀರ್ತಿ ಹೊಂದಿರುವ ಕೊಡಗಿನ ನೆಲದಲ್ಲಿ ತಿಮ್ಮಯ್ಯ ಮ್ಯೂಸಿಯಂ ರೂಪುಗೊಂಡಿರುವುದು ಭಾರತಕ್ಕೆ ಹೆಮ್ಮೆಮ್ಯೂಸಿಯಂನಲ್ಲಿ ತಿಮ್ಮಯ್ಯ ಸೇನಾ ಜೀವನ ನೋಡಿಭಾರತೀಯ ಸೇನೆಯ ಬಗ್ಗೆ ಹೆಮ್ಮೆಯ ಭಾವನೆಯೊಂದಿಗೆ ಹೊರಬರುತ್ತಿರುವಂತೆಯೇಪ್ರತಿಯೊಬ್ಬ ಸಂದರ್ಶಕನ ಮನದಲ್ಲಿ ವ್ಯಕ್ತಗೊಳ್ಳುವ ಭಾವನೆ ಒಂದೇಭಾರತದ ಹೆಮ್ಮೆಯ ಧೀರ ಸೇನಾಧಿಕಾರಿ ಜನರಲ್ ತಿಮ್ಮಯ್ಯ ಅವರಿಗೆ ಗೌರವದ ಸೆಲ್ಯೂಟ್ ಎಂದು ಶ್ರೀಶಾ ಹೇಳಿದರು

       ಗಿರಿ ಶ್ರೇಣಿಗಳ ನಡುವಿನ ಮಡಿಕೇರಿಯಲ್ಲಿ ಮಂಜಿನ ಮುಸುಕಿನಲ್ಲಿ ಬಾಲ್ಯ ಕಳೆದ ತಿಮ್ಮಯ್ಯ ಅವರುನಂತರ ಕಾಶ್ಮೀರದ ಪರ್ವತದ ಹಿಮಚ್ಚಾಧಿತ ಪ್ರದೇಶಗಳಲ್ಲಿ ತನ್ನ ಪರಾಕ್ರಮವನ್ನು ಜನರಲ್ ತಿಮ್ಮಯ್ಯ ಅವರು ತೋರಿದ್ದಾರೆ ಎಂದು ತಿಳಿಸಿದರು.

       ಪೊಲೀಸ್ ವೃತ್ತ ನಿರೀಕ್ಷಕರಾದ ಶಿವಶಂಕರಪೊಲೀಸ್ ಉಪ ನಿರೀಕ್ಷಕರಾದ ಶ್ರೀನಿವಾಸ್ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಮಣಜೂರು ಮಂಜುನಾಥ್ ಇತರರು ಇದ್ದರು.

ಸೇನಾ ಸ್ಮರಣಿಕೆ ಹಸ್ತಾಂತರಭಾರತೀಯ ಸೇನಾ ದಕ್ಷಿಣ ವಲಯದ ಮುಖ್ಯಸ್ಥರಾದ ಲೆಪ್ಟಿನೆಂಟ್ ಜನರಲ್ .ಕೆ.ಸಿಂಗ್ ಅವರು ಇತ್ತೀಚೆಗೆ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗೌರವ ಪೂರ್ವಕವಾಗಿ ನೀಡಲಾಗಿದ್ದ ‘ಸೇನಾ ಸ್ಮರಣಿಕೆಯನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂ ಸಂಚಾಲಕರಾದ ಮೇಜರ್(ನಿವೃತ್ತಬಿದ್ದಂಡ ನಂಜಪ್ಪ ಅವರು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರಿಗೆ ಹಸ್ತಾಂತರಿಸಿದರು.

Post a Comment

0 Comments

Ad Code

Responsive Advertisement