ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಆಮ್ ಆದ್ಮಿ ಪಾರ್ಟಿ ಗಂಭೀರವಾಗಿ ಪರಿಗಣಿಸಿದ್ದು, ಏಪ್ರಿಲ್ 18ರಿಂದ ಉತ್ತರ ಕರ್ನಾಟಕದಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಮತ್ತು ಏಪ್ರಿಲ್ 19ರಿಂದ ಬೆಂಗಳೂರಿನಲ್ಲಿ ಪಕ್ಷದ ರಾಜ್ಯಸಭಾ ರಾಘವ್ ಚಡ್ಡಾರವರು ಮತಯಾಚನೆ ಮಾಡಲಿದ್ದಾರೆ.
ಏಪ್ರಿಲ್ 18ರ ಮಂಗಳವಾರದಂದು ಹುಬ್ಬಳ್ಳಿಗೆ ಆಗಮಿಸಲಿರುವ ಭಗವಂತ್ ಮಾನ್, ಮಧ್ಯಾಹ್ನ 1:30ಕ್ಕೆ ಗದಗ ಜಿಲ್ಲೆಯ ರೋಣದಲ್ಲಿ ರೋಡ್ ಶೋ ಹಾಗೂ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಹುಬ್ಬಳ್ಳಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಏಪ್ರಿಲ್ 19ರಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ರೋಡ್ ಶೋ ಹಾಗೂ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಬಾಗಲಕೋಟೆ ಜಿಲ್ಲೆಯ ತೆರದಾಳಿನಲ್ಲಿ ರೋಡ್ ಶೋ ಹಾಗೂ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 3 ಗಂಟೆಗೆ ತೆರದಾಳಿನಲ್ಲಿ ನಡೆಯುವ ರೈತರ ರ‍್ಯಾಲಿಯಲ್ಲೂ ಭಗವಂತ್ ಮಾನ್ ಭಾಗವಹಿಸಿ, ನಂತರ ಹುಬ್ಬಳ್ಳಿಗೆ ತೆರಳಿ ಪಂಜಾಬ್‌ಗೆ ಹಿಂದಿರುಗಲಿದ್ದಾರೆ.
ಆಮ್ ಆದ್ಮಿ ಪಾರ್ಟಿ ರಾಜ್ಯಸಭಾ ಸದಸ್ಯರಾದ ರಾಘವ್ ಚಡ್ಡಾರವರು ಏಪ್ರಿಲ್ 19ರ ಬುಧವಾರದಂದು ಬೆಂಗಳೂರಿಗೆ ಆಗಮಿಸಿ, ಬೆಳಗ್ಗೆ 11 ಗಂಟೆಗೆ ಪುಲಿಕೇಶಿನಗರದ ರೋಡ್ ಶೋ ಹಾಗೂ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ 4.30ಕ್ಕೆ ಬ್ಯಾಟರಾಯನಪುರದಲ್ಲೂ ರೋಡ್ ಶೋ ನಡೆಸಲಿದ್ದಾರೆ. ಏಪ್ರಿಲ್ 20ರ ಗುರುವಾರದಂದು ಬೆಳಗ್ಗೆ 10 ಗಂಟೆಗೆ ದಾಸರಹಳ್ಳಿಯ ರೋಡ್ ಶೋ ಹಾಗೂ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಹಾಗೂ ಸಂಜೆ 4.30ಕ್ಕೆ ಸಿ.ವಿ.ರಾಮನ್ ನಗರದ ರೋಡ್ ಶೋನಲ್ಲಿ ರಾಘವ್ ಚಡ್ಡಾ ಭಾಗವಹಿಸಲಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯು ಪ್ರಕಟಣೆಯಲ್ಲಿ ತಿಳಿಸಿದೆ.

0 Comments