Ticker

6/recent/ticker-posts

Ad Code

Responsive Advertisement

ಕಮಲದ ಅಭ್ಯರ್ಥಿಯಾಗಿ ತಂಬಾಕು ಮಂಡಳಿ ಉಪಾಧ್ಯಕ್ಷ ಹೆಚ್.ಸಿ ಬಸವರಾಜು

 ಪಿರಿಯಾಪಟ್ಟಣ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಿರಿಯಾಪಟ್ಟಣ ತಾಲೂಕಿನಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಶಾಸಕ ತಂಬಾಕು ಮಂಡಳಿ ಉಪಾಧ್ಯಕ್ಷ ಹೆಚ್.ಸಿ ಬಸವರಾಜು ತಿಳಿಸಿದ್ದಾರೆ.


ಪತ್ರಿಕೆಯೊಂದಿಗೆ ಮಾತನಾಡಿದ ಅವರು ಮಾರ್ಚ್ 29 ರಂದು ಮೈಸೂರಿನಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರು ಹಾಗೂ ಮೈಸೂರು ಜಿಲ್ಲಾ ಚುನಾವಣಾ ಉಸ್ತುವಾರಿಗಳಾದ ನಿರ್ಮಲ್ ಕುಮಾರ್ ಸುರಾನ ಅವರ ನೇತೃತ್ವದಲ್ಲಿ ನಡೆದ ಜಿಲ್ಲೆಯ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದು ಒಂದು ವೇಳೆ ನನಗೆ ಟಿಕೆಟ್ ಕೈತಪ್ಪಿದರೆ ನನ್ನ ಮಗಳಾದ ಸುಚೇತ ರಾಜ್ ಅವರಿಗೆ ನೀಡಬೇಕೆಂದು ವರಿಷ್ಠರಲ್ಲಿ ಮನವಿ ಮಾಡಿದ್ದೇನೆ ಈ ವೇಳೆ ನನ್ನ ಮಗಳು ಸುಚೇತ ರಾಜ್ ಸಹ ಸಭೆಗೆ ಆಗಮಿಸಿ ವರಿಷ್ಠರಲ್ಲಿ ಮನವಿ ಮಾಡಿಕೊಂಡಿದ್ದಾರೆ, ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ಬದ್ಧರಾಗಿದ್ದು ಟಿಕೆಟ್ ನೀಡಿದರೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ ಇಲ್ಲವಾದಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಾಮಾಣಿಕ ಕರ್ತವ್ಯ ನಿರ್ವಹಿಸಿ ತಾಲೂಕಿನಾದ್ಯಂತ ಪ್ರಚಾರ ಕೈಗೊಂಡು ಪಕ್ಷ ಸಂಘಟನೆಗೆ ಒತ್ತು ನೀಡುವುದಾಗಿ ತಿಳಿಸಿದ್ದಾರೆ. 

1998 ರಲ್ಲಿ ಮೊದಲ ಬಾರಿಗೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಬಿಜೆಪಿ ಪಕ್ಷದ ಶಾಸಕರಾಗಿ ಆಯ್ಕೆಯಾದ ಬಳಿಕ ತಾಲೂಕಿನಾದ್ಯಂತ ಶಿಕ್ಷಣ ಆರೋಗ್ಯ ಕೃಷಿ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ನೀಡಿದ ಕೊಡುಗೆಗಳು ಇಂದು ಜನ ಮಾಸದಲ್ಲಿವೆ, ಕರಡಿಲಕ್ಕನಕೆರೆ ಏತ ನೀರಾವರಿ ಯೋಜನೆ ಜಾರಿಗೊಳಿಸುವ ಮೂಲಕ ತಾಲೂಕಿನ ಸಾವಿರಾರು ಎಕರೆ ಕೃಷಿ ಭೂಮಿಗೆ ನಿರೋದಗಿಸುವ ಮೂಲಕ ರೈತ ಪರ ಕರ್ತವ್ಯ ನಿರ್ವಹಿಸಲಾಗಿದೆ ತದನಂತರ ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಸ್ತುತ ಪಕ್ಷ ನನ್ನ ಮೇಲೆ ನಂಬಿಕೆ ಇಟ್ಟು ನೀಡಿರುವ ತಂಬಾಕು ಮಂಡಳಿ ಉಪಾಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ತಂಬಾಕು ರೈತರ ಹಿತ ಕಾಪಡಲಾಗುತ್ತಿದೆ ಎಂದರು.

Post a Comment

0 Comments

Ad Code

Responsive Advertisement