ಬೆಂಗಳೂರು: ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ಬೆಂಗಳೂರಿನ ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಆಚರಿಸಲಾಯಿತು.
ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಬಿಜೆಪಿ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಪುಲಿಕೇಶಿ ನಗರ ಬಿಜೆಪಿ ನಿಯೋಜಿತ ಅಭ್ಯರ್ಥಿ ಎ.ಮುರಳಿ ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
.jpeg)
0 Comments