ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅನೂಪ್ ಅಯ್ಯಂಗಾರ್ ರವರುಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವಿಧಾನ ಪರಿಷತ್ ನ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಜನರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಮಲ್ಲೇಶ್ವರಂ ನ 18 ನೇ ಅಡ್ಡರಸ್ತೆಯ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು
ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅನೂಪ್ ಐಯ್ಯಂಗಾರ್ ನಾಮಪತ್ರ ಸಲ್ಲಿಕೆ* ಮಲ್ಲೇಶ್ವರಂ ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅನೂಪ್ ಐಯ್ಯಂಗಾರ್ ರವರು ವಿಶೇಷ ಪೂಜೆ ಸಲ್ಲಿಸಿ, ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರ ಜೊತೆಯಲ್ಲಿ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.
*ಅಭ್ಯರ್ಥಿ ಅನೂಪ್ ಐಯ್ಯಂಗಾರ್ ರವರು ಮಾತನಾಡಿ* ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡ ಪಕ್ಷ, ಬಡವರ, ದೀನದಲಿತರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುವ ಪಕ್ಷವೆಂದರೆ ಕಾಂಗ್ರೆಸ್ ಪಕ್ಷ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ
ಕೆಪಿಸಿಸಿ ಡಿ.ಕೆ ಶಿವಕುಮಾರ್ ರವರು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯರವರು , ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್, ಕಾಂಗ್ರೆಸ್ ಪಕ್ಷದ ಮುಖಂಡರಾದ, ಎಂ ಆರ್ ಸೀತಾರಾಮ್ ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಮಲ್ಲೇಶ್ನರಂ ವಿಧಾನಸಭಾ ಕ್ಷೇತ್ರದಲ್ಲಿ ಸಮರ್ಥ, ಸಧೃಡವಾಗಿದೆ.
ಚುನಾವಣೆಯಲ್ಲಿ ನಾಡಿನ ಜನತೆಗೆ 200ಯೂನಿಟ್ ವಿದ್ಯುತ್, ಮನೆಯ ಯಾಜಮಾನಿಗೆ 2000ಸಹಾಯಧನ ಮತ್ತು ಪ್ರತಿ ವ್ಯಕ್ತಿಗೆ 10ಕೆ.ಜಿ.ಅಕ್ಕಿ ಉಚಿತ ಮತ್ತು ನಿರುದ್ಯೋಗ ಭತ್ಯೆ ಯೋಜನೆ ಘೋಷಣೆ ಮಾಡಲಾಗಿದೆ. ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಭ್ರಷ್ಟಚಾರ ಮೂಲಕ ಕಳಪೆ ಕಾಮಗಾರಿ ಮಾಡಿದ್ದಾರೆ. ಸ್ಯಾಂಕಿ ಉದ್ಯಾನವನ ಇನ್ನು ಅಭಿವೃದ್ದಿಯಾಗಿಲ್ಲ. ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ನವ ನಿರ್ಮಾಣ ಮಾಡಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಮತ್ತು ಸರ್ವರಿಗೂ ಸಮಪಾಲು,ಸರ್ವರಿಗೂ ಸಮಬಾಳು ಸಿದ್ದಾಂತೆದಂತೆ ನಡೆಯುತ್ತದೆ. ನಮ್ಮ ಪಕ್ಷದ ನಾಲ್ಕು ಯೋಜನೆಗಳಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಆಸರೆಯಾಗುತ್ತದೆ ಮತ್ತು ಆರ್ಥಿಕವಾಗಿ ಸಬಲರಾಗುತ್ತಾರೆ .ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗುತ್ತದೆ.

0 Comments