ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಹುಬ್ಬಳ್ಳಿಯಲ್ಲಿಂದು ಮೂರುಸಾವಿರ ಮಠಕ್ಕೆ ಭೇಟಿ ನೀಡಿ, ಮಠದ ಸ್ವಾಮೀಜಿಗಳಾದ ಶ್ರೀ ಗುರು ಸಿದ್ಧೇಶ್ವರ ಮಹಾಸ್ವಾಮಿಗಳ ಆಶೀರ್ವಚನ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಗುರುಸಿದ್ಧೇಶ್ವರ ಮಹಾಸ್ವಾಮಿಗಳು, ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಗೌರವವನ್ನು ಹೆಚ್ಚಿಸುವತ್ತ ಪ್ರಧಾನಮಂತ್ರಿ ನರೇಂದ್ರಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಶ್ರಮಿಸುತ್ತಿದ್ದಾರೆ. ಇವರೆಲ್ಲರಿಗೂ ಅಭಿನಂದನೆಗಳು. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎಲ್ಲ ರೀತಿಯಲ್ಲಿ ಶ್ರಮಿಸುತ್ತಿದೆ. ಕೇಂದ್ರ ಸಚಿವÀ ಪ್ರಲ್ಹಾದ್ ಜೋಷಿ ಅವರು ಕರ್ನಾಟಕಕ್ಕೆ ಅನೇಕ ಯೋಜನೆಗಳನ್ನು ತಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷÀ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯವನ್ನು ಮುನ್ನಡೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಇಂದು ಉತ್ತಮ ನಾಯಕತ್ವದಲ್ಲಿ ನಮ್ಮ ಹಿಂದೂ ಧರ್ಮ, ಸಂಸ್ಕøತಿಯನ್ನು ಶತಮಾನಗಳಷ್ಟು ಮುಂದೆ ಕೊಂಡೊಯ್ಯುವ ಕೆಲಸ ನಡೆಯಬೇಕಿದೆ. ಹಿಂದೂ ಪರಂಪರೆಯೊಂದಿಗೆ ರಾಷ್ಟ್ರ ಪ್ರಗತಿ ಕಾರ್ಯಕ್ಕೆ ಮಠದ ವತಿಯಿಂದ ಶುಭಕಾಮನೆಗಳು ಎಂದು ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮಿಗಳು ನುಡಿದರು.
ಈ ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.


0 Comments