ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಏಪ್ರಿಲ್ 21 ರಿಂದ 30ರ ವರೆಗೆ ಮಧ್ಯಾಹ್ನ 2-00 ರಿಂದ ಸಂಜೆ 6-00 ಗಂಟೆಯವರೆಗೆ ಮಂತ್ರಾಲಯ ಶ್ರೀ ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ಅಧ್ಯಾಪಕರ ವರ್ಗದಿಂದ "ಬೇಸಿಗೆ ಧಾರ್ಮಿಕ ಶಿಕ್ಷಣಶಿಬಿರ"ವನ್ನು ತ್ರಿಮತಸ್ಥ ಬ್ರಾಹ್ಮಣರಿಗೆ ಶ್ರೀಮಠದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಶಿಬಿರದಲ್ಲಿ ಭಾಗವಹಿಸುವಂತಹ ವಿದ್ಯಾರ್ಥಿಗಳು ಏಪ್ರಿಲ್ 20ರ ಒಳಗೆ ತಮ್ಮ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಿ, ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ ಪಾತ್ರರಾಗಬಹುದು.
ಹೆಚ್ಚಿನ ಮಾಹಿತಿಗಾಗಿ- ಶ್ರೀಮಠದ ವ್ಯವಸ್ಥಾಪಕರಾದ ಆರ್.ಕೆ. ವಾದಿಂದ್ರಾಚಾರ್ಯ, ಶ್ರೀ ನಂದಕಿಶೋರಾಚಾರ್ಯ, ಇವರನ್ನು ಸಂಪರ್ಕಿಸಬಹುದು ಎಂದು ಶ್ರೀಮಠದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
9945429129-9448847586-9449133929-08022443962

0 Comments